ಸೀಮಾ ಹೈದರ್‌ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ – ಪಾಕ್‌ ಮಹಿಳೆಯಿಂದ ಭಾರತೀಯ ಯೋಧರಿಗೆ ಫ್ರೆಂಡ್‌ ರಿಕ್ವೆಸ್ಟ್‌

Public TV
1 Min Read

ಲಕ್ನೋ: ಆನ್‌ಲೈನ್‌ ಗೇಮ್‌ ಪಬ್ಜಿ (PUBG) ಪ್ರೇಮಿಗಾಗಿ ತನ್ನ 4 ಮಕ್ಕಳೊಂದಿಗೆ ಭಾರತಕ್ಕೆ ಅಕ್ರಮ ಪ್ರವೇಶ ಮಾಡಿದ್ದ ಪಾಕಿಸ್ತಾನದ (Pakistani National) ಮಹಿಳೆ ಸೀಮಾ ಹೈದರ್‌ (Seema Haider) ಪ್ರಕರಣ ದಿನಕ್ಕೊಂದು ಸ್ಫೋಟಕ ಟ್ವಿಸ್ಟ್‌ ಪಡೆದುಕೊಳ್ಳುತ್ತಿದೆ.

ಪ್ರೀತಿಗಾಗಿ ಪಾರಿವಾಳದಂತೆ ಗಡಿ ದಾಟಿ ಬಂದ ಮಹಿಳೆಯ ಕಥೆಗೆ ಈಗ ಐಎಸ್‌ಐ ನಂಟು ತಳಕು ಹಾಕಿಕೊಂಡಿದೆ. ಈ ನಿಟ್ಟಿನಲ್ಲಿ ಉತ್ತರ ಪ್ರದೇಶ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅದಕ್ಕೆ ಪೂರಕವೆಂಬಂತೆ ಪೊಲೀಸರು ಮತ್ತೊಂದು ಸ್ಫೋಟಕ ಮಾಹಿತಿಯನ್ನು ಹೊರಬಿಟ್ಟಿದ್ದಾರೆ. ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್‌, ಭಾರತೀಯ ಸೇನಾ ಯೋಧರಿಗೆ ಫೇಸ್‌ಬುಕ್‌ನಲ್ಲಿ ಫ್ರೆಂಡ್‌ ರಿಕ್ವೆಸ್ಟ್‌ ಕಳುಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ISI ನಂಟಿನ ಶಂಕೆ – ಅಕ್ರಮವಾಗಿ ಭಾರತ ಪ್ರವೇಶಿಸಿದ ಸೀಮಾ ಹೈದರ್ ತೀವ್ರ ವಿಚಾರಣೆ

ಪಾಕಿಸ್ತಾನದ ಸೇನೆ ಮತ್ತು ಅಲ್ಲಿನ ಗುಪ್ತಚರ ಸಂಸ್ಥೆ ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್‌ನೊಂದಿಗೆ (ISI) ಆಕೆಗೆ ಸಂಬಂಧದ ಶಂಕೆಯ ಹಿನ್ನೆಲೆ ಎಟಿಎಸ್ ಹಾಗೂ ಇಂಟೆಲಿಜೆನ್ಸ್ ಬ್ಯೂರೋ (IB) ವಿಚಾರಣೆಗೆ ಒಳಪಡಿಸಿದೆ. ಮಾತ್ರವಲ್ಲದೇ ಸೀಮಾ ಹೈದರ್‌ನ ಈ ಹಿಂದೆ ಡಿಲೀಟ್ ಆಗಿರುವ ಮೊಬೈಲ್ ಡೇಟಾವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಆಕೆಯ ಸೋಷಿಯಲ್‌ ಮೀಡಿಯಾ ಖಾತೆಗಳನ್ನು ಸಹ ತನಿಖೆಗೆ ಒಳಪಡಿಸಲಾಗಿದೆ.

30 ವರ್ಷದ ಸೀಮಾಗೆ ಆನ್‌ಲೈನ್ ಗೇಮ್ ಪಬ್ಜಿ ಮೂಲಕ ಭಾರತದ ನಿವಾಸಿ ಸಚಿನ್ ಪರಿಚಯವಾಗಿತ್ತು. ಬಳಿಕ ಪರಿಚಯ ಪ್ರೀತಿಗೆ ತಿರುಗಿದ್ದು, ಆತನೊಂದಿಗೆ ಜೀವಿಸುವ ಸಲುವಾಗಿ ತನ್ನ 4 ಮಕ್ಕಳೊಂದಿಗೆ ಮೇ ತಿಂಗಳಿನಲ್ಲಿ ನೇಪಾಳದ ಮೂಲಕ ಬಸ್‌ನಲ್ಲಿ ಭಾರತ ಪ್ರವೇಶಿಸಿದ್ದಳು. ಕಳೆದ 2 ತಿಂಗಳಿನಿಂದ ಆಕೆ ತನ್ನ ಗೆಳೆಯ ಸಚಿನ್ ಜೊತೆಗೆ ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯ ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದಲ್ಲಿ ವಾಸಿಸುತ್ತಿದ್ದಳು. ಇದನ್ನೂ ಓದಿ: ಅವಳಿನ್ನೂ ಮುಸಲ್ಮಾನಳಲ್ಲ, ಪಾಕಿಸ್ತಾನಕ್ಕೆ ಬರೋದು ಬೇಡ – ಪಾಕ್ ಮಹಿಳೆ ಪೋಷಕರ ಫಸ್ಟ್ ರಿಯಾಕ್ಷನ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್