ಪಬ್‌ಜೀ ಮೂಲಕವೇ ಭಾರತದ ಹಲವರನ್ನ ಸಂಪರ್ಕಿಸಿದ್ದಾಳೆ ಸೀಮಾ – ಸ್ಫೋಟಕ ರಹಸ್ಯ ಬಯಲು

Public TV
2 Min Read

ಲಕ್ನೋ: ಸೀಮಾ ಹೈದರ್‌ ಪಬ್‌ಜೀ (PUBG) ಮೂಲಕ ಸಚಿನ್‌ ಜೊತೆಗೆ ಮಾತ್ರವಲ್ಲ ಭಾರತದ ಹಲವರನ್ನ ಸಂಪರ್ಕಿಸಿದ್ದಾಳೆ ಅನ್ನೋ ಸ್ಫೋಟಕ ರಹಸ್ಯ ವಿಚಾರಣೆ ವೇಳೆ ಬಯಲಾಗಿದೆ. ಸೀಮಾ ದೆಹಲಿ ಎನ್‌ಸಿಆರ್‌ (Delhi NCR) ಪ್ರದೇಶದ ಹಲವರನ್ನ ಪಬ್‌ಜೀ ಮೂಲಕ ಸಂಪರ್ಕಿಸಿದ್ದಾಳೆ ಎಂದು ತಿಳಿದುಬಂದಿದೆ. ಇದೀಗ ಎಲ್ಲ ಆಯಾಮಗಳಲ್ಲೂ ವಿಚಾರಣೆ ನಡೆಸುತ್ತಿರುವ ನೋಯ್ಡಾ ಪೊಲೀಸರು ಅಕ್ರಮವಾಗಿ ಭಾರತ ಪ್ರವೇಶಿಸಿದ ಪಾಕಿಸ್ತಾನಿ ಮಹಿಳೆಯ ಎಲ್ಲಾ ದಾಖಲೆಗಳನ್ನ ವಶಪಡಿಸಿಕೊಂಡಿದ್ದು, ದೆಹಲಿಯಲ್ಲಿರುವ ಪಾಕಿಸ್ತಾನ ರಾಜಭಾರಿ ಕಚೇರಿಗೆ ಪರಿಶೀಲನೆಗಾಗಿ ಕಳುಹಿಸಿದ್ದಾರೆ.

ಮೇ ತಿಂಗಳಲ್ಲಿ ತನ್ನ ಪ್ರೇಮಿ ಸಚಿನ್‌ ಮೀನಾ ಜೊತೆ ನೆಲೆಸಲು ನೇಪಾಳ ಗಡಿ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಸೀಮಾ ಹೈದರ್‌ ಪಾಕಿಸ್ತಾನದ ಗೂಢಚಾರಿ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಭದ್ರತಾ ಏಜೆನ್ಸಿಗಳು ತೀವ್ರ ನಿಗಾ ವಹಿಸಿವೆ. ಇದನ್ನೂ ಓದಿ: ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದೇನೆ ಭಾರತದಲ್ಲೇ ಇರಲು ಅವಕಾಶ ಕೊಡಿ – ರಾಷ್ಟ್ರಪತಿಗೆ ಸೀಮಾ ಹೈದರ್‌ ಪತ್ರ

ಸೀಮಾಳ ಪಾಸ್‌ಪೋರ್ಸ್‌, ಪಾಕಿಸ್ತಾನಿ ಗುರುತಿನ ಚೀಟಿ ಹಾಗೂ ಮಕ್ಕಳ ಪಾಸ್‌ಪೋರ್ಟ್‌ ಸೇರಿದಂತೆ ಎಲ್ಲಾ ದಾಖಲೆಗಳನ್ನ ಪೊಲೀಸರು ತನಿಖೆ ಸಮಯದಲ್ಲಿ ವಶಪಡಿಸಿಕೊಂಡಿದ್ದಾರೆ. ಆಕೆಯ ಗುರುತು ಪರಿಶೀಲನೆಗಾಗಿ ಪಾಕಿಸ್ತಾನ ರಾಯಭಾರಿ ಕಚೇರಿಗೆ ಕಳುಹಿಸಿದ್ದಾರೆ. ಅಲ್ಲಿಂದ ವರದಿ ಬರುವವರೆಗೆ ತನಿಖೆ ಮುಂದುವರಿಯಲಿದೆ. ಆರೋಪಗಳು ದೃಢಪಟ್ಟ ನಂತರ ದೋಷಾರೋಪ ಪಟ್ಟಿ ಸಿದ್ಧಪಡಿಸಲಾಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ ಸೀಮಾ ಹೈದರ್‌ ತನ್ನ ಮೊಬೈಲ್‌ ಡೇಟಾವನ್ನು ಡಿಲೀಟ್‌ ಮಾಡಿರುವ ಶಂಕೆ ಹಿನ್ನೆಲೆ ಮೋಬೈಲ್‌ ಅನ್ನು ಗಾಜಿಯಾಬಾದ್‌ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಆದ್ರೆ ಸೀಮಾ ಹೈದರ್‌ ತನ್ನ ಯಾವುದೇ ಡೇಟಾವನ್ನ ಅಳಿಸಿಹಾಕಿಲ್ಲ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸೀಮಾ ಹೈದರ್‌ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ – ಪಾಕ್‌ ಮಹಿಳೆಯಿಂದ ಭಾರತೀಯ ಯೋಧರಿಗೆ ಫ್ರೆಂಡ್‌ ರಿಕ್ವೆಸ್ಟ್‌

ಸೀಮಾ ಆಧಾರ್‌ ಬದಲಾವಣೆ?
ಈ ನಡುವೆ ಸಚಿನ್‌ ಮೀನಾ ಮತ್ತು ಸೀಮಾ ಹೈದರ್‌ಗೆ ಸಂಬಂಧಿಸಿದ ದಾಖಲೆಗಳು ಮತ್ತು ಆಧಾರ್‌ ಕಾರ್ಡ್‌ ಬದಲಾವಣೆ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಇಬ್ಬರು ಸಹೋದರರನ್ನ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಪುಷ್ಪೇಂದ್ರ ಮೀನಾ ಮತ್ತು ಅವರ ಸಹೋದರ ಪವನ್ ಆರೋಪಿಗಳನ್ನ ಅಹ್ಮದ್‌ಗಢದ ಸಾರ್ವಜನಿಕ ಸೇವಾ ಕೇಂದ್ರದಲ್ಲಿ ಆರೋಪಿಗಳಾಗಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್