‘ಸೀತಾರಾಮ’ ನಟಿಗೆ ಕಿಡಿಗೇಡಿಗಳ ಕಾಟ- ವೈರಲ್ ಆಗ್ತಿದೆ ಡೀಪ್ ಫೇಕ್ ಫೋಟೋ

Public TV
1 Min Read

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna), ಕತ್ರಿನಾ ಕೈಫ್ ಅವರ ವಿಡಿಯೋ ಡೀಪ್ ಫೇಕ್ ಮಾಡಿದ್ದರು. ಈ ವಿಚಾರ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಈಗ ಅಗ್ನಿಸಾಕ್ಷಿ, ಸೀತಾರಾಮ ಸೀರಿಯಲ್‌ ಖ್ಯಾತಿಯ ನಟಿ ವೈಷ್ಣವಿ ಗೌಡಗೆ (Vaishnavi Gowda) ಕಿಡಿಗೇಡಿಗಳಿಂದ ಡೀಪ್ ಫೇಕ್ (Deep Fake) ಕಾಟ ಎದುರಾಗಿದೆ. ಇದನ್ನೂ ಓದಿ:ಹೆಸರು ಬದಲಿಸಿಕೊಂಡ ಅಣ್ಣಾವ್ರ ಮೊಮ್ಮಗ ಧೀರೇನ್

ವೈಷ್ಣವಿ ಅವರ ಫೋಟೋವನ್ನು ಕಿಡಿಗೇಡಿಗಳಿಗೆ ಬೇಕಾದ ರೀತಿಯಲ್ಲಿ ಎಡಿಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳು ಫುಲ್ ಶಾಕ್ ಆಗಿದ್ದಾರೆ. ಇಷ್ಟು ಎಕ್ಸ್‌ಪೋಸ್ ಬೇಕಿತ್ತಾ ಅಂತ ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಷ್ಟಕ್ಕೂ ಇದು ನಿಜವಾದ ಫೋಟೋ ಅಲ್ಲ. ಕೆಲ ಕಿಡಿಗೇಡಿಗಳು ಬೋಲ್ಡ್ ಆಗಿ ಎಡಿಟ್ ಮಾಡಿ ಇಂಟರ್‌ನೆಟ್‌ನಲ್ಲಿ ವೈರಲ್ ಆಗುವಂತೆ ಮಾಡಿದ್ದಾರೆ. ರಿಯಲ್‌ ಆಗಿ ವೈಷ್ಣವಿದೇ ಲುಕ್‌ ಎಂದು ಭಾವಿಸಿ ಫ್ಯಾನ್ಸ್‌ ದಂಗಾಗಿದ್ದಾರೆ.


ಸದ್ಯ ಈ ಡೀಪ್ ಫೇಕ್ ಬಗ್ಗೆ ‘ಸೀತಾರಾಮ’ (Seetharama) ನಟಿ ವೈಷ್ಣವಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಮುಂದಿನ ದಿನಗಳಲ್ಲಿ ಕಿಡಿಗೇಡಿಗಳ ವಿರುದ್ಧ ಕಾನೂನು ಸಮರಕ್ಕೆ ಮುಂದಾಗ್ತಾರಾ? ಎಂದು ಕಾದುನೋಡಬೇಕಿದೆ.

Share This Article