ಹಿರಿಯ ನಟ ಎಂಎಸ್ ಉಮೇಶ್ (Umesh) ಮನೆಯಲ್ಲಿ ಕಾಲುಜಾರಿ ಬಿದ್ದು ಸೊಂಟ ಹಾಗೂ ಬಲಗೈ ಭುಜಕ್ಕೆ ಪೆಟ್ಟು ಮಾಡಿಕೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.
ಹಿರಿಯ ನಟ ಉಮೇಶ್ ಅವರಿಗೆ ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನಿಂಗ್ ಮಾಡಿದ ಬಳಿಕ ಲಿವರ್‌ನಲ್ಲಿ ಘನಗಾತ್ರದ ಗೆಡ್ಡೆ ಪತ್ತೆಯಾಗಿದೆ. ಲಿವರ್ ಕ್ಯಾನ್ಸರ್ ಆಗಿ ಅದು ಬೇರೆ ಬೇರೆ ಅಂಗಗಳಿಗೆ ಹರಡಿದೆ ಎಂದು ಶಾಂತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಹಿರಿಯ ನಟ ಉಮೇಶ್‌ಗೆ ಕ್ಯಾನ್ಸರ್; 4ನೇ ಸ್ಟೇಜ್‌ನಲ್ಲಿ ಕಾಯಿಲೆ
ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಟ ಉಮೇಶ್ ಅವರ ಆರೋಗ್ಯವನ್ನ ವಿಚಾರಿಸಿದ್ದಾರೆ ಹಿರಿಯ ಕಲಾವಿದರು. ಈ ವೇಳೆ ತಮ್ಮ ಒಡನಾಟ ಹಾಗೂ ಹಳೆದಿನ ಶೂಟಿಂಗ್ ವೇಳೆ ಕಳೆದ ದಿನಗಳನ್ನ ಮೆಲುಕು ಹಾಕಿದ್ದಾರೆ. ಹಿರಿಯ ನಟಿ ಗಿರಿಜಾ ಲೋಕೇಶ್ ಹಾಡು ಹೇಳಿ ಉಮೇಶ ಅವರ ಜೊತೆ ಕೆಲಹೊತ್ತು ಕಾಲಕಳೆದಿದ್ದಾರೆ. ಹಿರಿಯ ನಟಿ ಗಿರಿಜಾ ಲೋಕೇಶ್, ಡಿಂಗ್ರಿ ನಾಗರಾಜ್, ಶ್ರುತಿ ಅವರ ತಾಯಂದಿರು ಹಾಗೂ ತಂದೆ, ನಟ ಗಣೇಶ್ ರಾವ್ ಸೇರಿ ಮುಂತಾದವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಹಿರಿಯ ನಟ ಉಮೇಶ್ ಅವರು ಕನ್ನಡ ಚಿತ್ರರಂಗ, ರಂಗಭೂಮಿಯಲ್ಲಿ ಕಲಾ ಸೇವೆಯನ್ನ ಸಲ್ಲಿಸಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ. ಬೇಗ ಗುಣಮುಖರಾಗಿ ಬರಲೆಂದು ಆಪ್ತರು, ಅಭಿಮಾನಿಗಳ ಆಶಯವಾಗಿದೆ. ಇದನ್ನೂ ಓದಿ: ಕನ್ನಡಿಗರ ಆಶೀರ್ವಾದ ಇರೋತನಕ ಬಿಗ್ ಬಾಸ್ ನಿಲ್ಲಲ್ಲ – ಮೌನ ಮುರಿದ ಕಿಚ್ಚ ಸುದೀಪ್