ಹಿರಿಯ ಪತ್ರಕರ್ತ ಜಿ.ಎಂ.ಕುಲಕರ್ಣಿ ನಿಧನ

Public TV
1 Min Read

ಹಾವೇರಿ: ಕವಿ ಹಾಗೂ ಹಿರಿಯ ಪತ್ರಕರ್ತರಾಗಿದ್ದ ನಗರದ ಜಿ.ಎಂ.ಕುಲಕರ್ಣಿ(58) ಅವರು ತೀವ್ರ ಅನಾರೋಗ್ಯದಿಂದ ಭಾನುವಾರ ಮಧ್ಯಾಹ್ನ ನಿಧನವಾಗಿದ್ದಾರೆ.

ಕುಲಕರ್ಣಿ ಅವರಿಗೆ ಹೃದಯದಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇದನ್ನೂ ಓದಿ:  ಅವಧಿ ಮೀರಿ ವಾಸಗೃಹದಿಂದ ಕುಟುಂಬ ಹೊರಹಾಕಿದ್ದ ಪ್ರಕರಣ ಸುಖಾಂತ್ಯ – ಮೃತ ನೌಕರನ ಪುತ್ರನಿಗೆ ಗುತ್ತಿಗೆ ನೌಕರಿ

ಕುಲಕರ್ಣಿ ಅವರು ‘ಕತ್ತಲಲ್ಲಿ ಕಾಲಿ ತಟ್ಟೆ ಹಿಡಿದವರು’ ಎಂಬ ಕವನ ಸಂಕಲನ ಹೊರತಂದಿದ್ದರು. ಜೊತೆಗೆ ‘ಸಿಂಚನ ಪ್ರಕಾಶ’ನ ಹೊಂದಿದ್ದರು. ತಮ್ಮ ಪ್ರಕಾಶನದ ಮೂಲಕ ಅನೇಕ ಲೇಖಕರ ಪುಸ್ತಕ ಪ್ರಕಟಿಸಿದ್ದಾರೆ. ಮಾಧ್ಯಮ ಲೋಕದಲ್ಲಿ ಜಿ.ಎಂ.ಕುಲಕರ್ಣಿ ಅವರ ಹೆಸರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರಚಲಿತದಲ್ಲಿತ್ತು.

ನಾಡಿನ ಅನೇಕ ಹಿರಿಯ ಸಾಹಿತಿಗಳೊಂದಿಗೆ, ಮಠಾಧೀಶರೊಂದಿಗೆ ಇವರು ಒಡನಾಟ ಹೊಂದಿದ್ದರು. ಕುಲಕರ್ಣಿ ಅವರ ನಿಧನದಿಂದ ಸಾಹಿತ್ಯ ಹಾಗೂ ಮಾಧ್ಯಮರಂಗಕ್ಕೆ ಬಹುದೊಡ್ಡ ಹಾನಿಯಾಗಿದೆ. ಕುಲಕರ್ಣಿ ನಿಧನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು, ಪತ್ರಕರ್ತರ ಬಳಗ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಜಿಲ್ಲೆಗೊಂದು ಮಠ ಮಾಡಲಿ ಮೂರನೇ ಪಂಚಮಸಾಲಿ ಪೀಠಕ್ಕೆ ನಮ್ಮ ಬೆಂಬಲ: ವಚನಾನಂದ ಸ್ವಾಮೀಜಿ

Share This Article
Leave a Comment

Leave a Reply

Your email address will not be published. Required fields are marked *