ನವದೆಹಲಿ: ಯೆಮೆನ್‌ನಲ್ಲಿ ಮರಣ ದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ವಿಚಾರದಲ್ಲಿ ವಿದೇಶಾಂಗ ಸಚಿವಾಲಯ (Ministry of External Affairs) ಮಹತ್ವದ ಹೇಳಿಕೆ ನೀಡಿದೆ. ಇದು ಸೂಕ್ಷ್ಮ ವಿಷಯವಾಗಿದ್ದು, ಭಾರತ ಸರ್ಕಾರವು ಈ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಸಚಿವಾಲಯ ಹೇಳಿದೆ.
2017 ರಲ್ಲಿ ಕೇರಳದ ನರ್ಸ್ (Kerala Nurse) ನಿಮಿಷಾ ಪ್ರಿಯಾ ಅವರಿಂದ ತಲಾಲ್ ಅಬ್ದೋ ಮೆಹದಿ ಕೊಲೆಯಾಗಿದ್ದರು. ಪ್ರಕರಣ ಸಂಬಂಧ ಪ್ರಿಯಾಳಿಗೆ ಯೆಮನ್ ರಾಷ್ಟ್ರದ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ. ಈ ಸಂಬಂಧ ಕೊಲೆಯಾದ ವ್ಯಕ್ತಿಯ ಸಹೋದರ ಅಬ್ದೆಲ್ಫತ್ತಾ ಮೆಹದಿ ಪ್ರತಿಕ್ರಿಯಿಸಿದ್ದು, ಈ ಅಪರಾಧಕ್ಕೆ ಕ್ಷಮೆ ನೀಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಈ ಬೆಳವಣಿಗೆಯ ಮರುದಿನವೇ ವಿದೇಶಾಂಗ ಸಚಿವಾಲಯದ ಹೇಳಿಕೆ ಹೊರಬಂದಿದೆ. ಇದನ್ನೂ ಓದಿ: ಇರಾಕ್‌ನ ಶಾಪಿಂಗ್ ಮಾಲ್‌ನಲ್ಲಿ ಬೆಂಕಿ ಅವಘಡ – 50 ಮಂದಿ ಸಾವು
ಇದು ಅತ್ಯಂತ ಸೂಕ್ಷ್ಮ ವಿಷಯ. ಭಾರತ ಸರ್ಕಾರವು ಈ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದೆ. ಕಾನೂನು ನೆರಚು ನೀಡಿದ್ದೇವೆ, ಕುಟುಂಬಕ್ಕೆ ಸಹಾಯ ಮಾಡಲು ವಕೀಲರನ್ನ ನೇಮಿಸಿದ್ದೇವೆ. ನಿಯಮಿತ ಕಾನ್ಸುಲರ್ ಭೇಟಿ ಮಾಡು ಏರ್ಪಾಡು ಮಾಡಿದ್ದೇವೆ. ಸಮಸ್ಯೆಯನ್ನು ಬಗೆಹರಿಸಲು ಸ್ಥಳೀಯ ಅಧಿಕಾರಿಗಳು ಮತ್ತು ಕುಟುಂಬ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಪ್ರಕಟಣೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳ ನರ್ಸ್ ತಪ್ಪಿಗೆ ಕ್ಷಮೆಯಿಲ್ಲ, ಗಲ್ಲಿಗೇರಿಸಲೇಬೇಕು: ಕೊಲೆಯಾದ ಯೆಮನ್ ವ್ಯಕ್ತಿ ಸಹೋದರ ಪ್ರತಿಕ್ರಿಯೆ
ಜು.16 ರಂದು ನಿಮಿಷಾ ಪ್ರಿಯಾಳನ್ನು ಗಲ್ಲಿಗೇರಿಸಬೇಕಿತ್ತು. ಆದ್ರೆ, ಮಾತುಕತೆಗಳ ದೀರ್ಘಾವಧಿಯ ನಂತರ, ಆಕೆಯ ಮರಣದಂಡನೆಯನ್ನ ಅಮಾನತಿನಲ್ಲಿ ಇರಿಸಲಾಗಿದೆ. ಸೌದಿ ಅರೇಬಿಯಾದಲ್ಲಿರುವ ಏಜೆನ್ಸಿಗಳು, ಭಾರತ ಸರ್ಕಾರ, ಯೆಮನ್‌ನ ಶೂರಾ ಕೌನ್ಸಿಲ್‌ನಲ್ಲಿರುವ ಸ್ನೇಹಿತರು, ಕೇರಳದ ಪ್ರಭಾವಿ ಸುನ್ನಿ ಮುಸ್ಲಿಂ ಧಾರ್ಮಿಕ ಗುರು ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಮಧ್ಯಪ್ರವೇಶದಿಂದ ಮುಂದಿನ ಆದೇಶದವರೆಗೆ ಮರಣದಂಡನೆಯನ್ನು ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ.
ಈ ವಿಷಯವನ್ನು ನಿಕಟವಾಗಿ ನಿಕಟವಾಗಿ ಗಮನಿಸುತ್ತಿದ್ದೇವೆ, ಕೆಲ ಸ್ನೇಹಪರ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಇದನ್ನೂ ಓದಿ: ಸಿರಿಯಾ ಮಿಲಿಟರಿ ಹೆಡ್‌ಕ್ವಾಟ್ರಸ್ ಮೇಲೆ ಇಸ್ರೇಲ್ ದಾಳಿ – ಲೈವ್‌ನಿಂದಲೇ ಎದ್ದು ಓಡಿದ ಟಿವಿ ಆಂಕರ್
ಏನಿದು ಕೇಸ್?
ಕೇರಳದ ನಿಮಿಷಾ ಪ್ರಿಯಾ ಅವರು 2017ರಲ್ಲಿ ಯೆಮನ್‌ನಲ್ಲಿ ತನ್ನ ಕ್ಲಿನಿಕ್ ಪಾಲುದಾರನಾಗಿದ್ದ ಅಲ್ಲಿನ ಪ್ರಜೆಯನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. 2020ರಲ್ಲಿ ಕೆಳ ಹಂತದ ನ್ಯಾಯಾಲಯ ಪ್ರಿಯಾಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಪ್ರಿಯಾಳ ಮೇಲ್ಮನವಿಯನ್ನು ಅಲ್ಲಿನ ಸುಪ್ರೀಂ ಕೋರ್ಟ್ 2023ರಲ್ಲಿ ವಜಾ ಮಾಡಿತ್ತು.