ಎರಡು ಕಾರು, ಲಾರಿ ಮಧ್ಯೆ ಸರಣಿ ಅಪಘಾತ – ನಾಲ್ವರು ದುರ್ಮರಣ

Public TV
1 Min Read

ಹುಬ್ಬಳ್ಳಿ: ಎರಡು ಕಾರು (Car) ಮತ್ತು ಲಾರಿ (Lorry) ನಡುವೆ ಸರಣಿ ಅಪಘಾತ (Accident) ನಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಧಾರವಾಡ (Dharwad) ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿ ನಡೆದಿದೆ.

ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ (Hubballi) ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಸ್ಥಳಕ್ಕೆ ಧಾರವಾಡ ಎಸ್ಪಿ ಡಾ.ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಹೋಟೆಲ್‌ಗೆ ಊಟಕ್ಕೆ ಹೋಗೋಣ ಎಂದ ಮ್ಯಾನೇಜರ್ ಮನೆಗೆ ಕರೆದೊಯ್ದು ರೇಪ್‌ ಮಾಡ್ದ!

ಈ ಘಟನೆಯಲ್ಲಿ ಹಾಸನ ಮೂಲದ ಮೂವರು ಹಾಗೂ ಬೆಂಗಳೂರಿನ ಒಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಮಣಿಕಂಠ (26), ಪವನ (23), ಚಂದನ (31) ಎಂದು ಗುರುತಿಸಲಾಗಿದೆ. ಈ ಮೂವರು ಪರಸ್ಪರ ಗೆಳೆಯರಾಗಿದ್ದು, ಹಾಸನದಿಂದ ಗೋವಾಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಮೃತಪಟ್ಟ ಮತ್ತೋರ್ವನನ್ನು ಹರೀಶ್ (34) ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರಿನಿಂದ ಶಿರಡಿಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಮೆಟ್ರೋ ರೈಲು ಬಂದಾಗ ಏಕಾಏಕಿ ಹಳಿಗೆ ಧುಮುಕಿ ಆತ್ಮಹತ್ಯೆಗೆ ಯತ್ನ- ICUವಿನಲ್ಲಿ ಚಿಕಿತ್ಸೆ

Share This Article