ಬೆಂಗಳೂರಿನಲ್ಲಿ ಅಂಬುಲೆನ್ಸ್‌ನಿಂದ ಸರಣಿ ಅಪಘಾತ – ಚಾಲಕನ ಬಂಧನ

Public TV
1 Min Read

ಬೆಂಗಳೂರು: ಅಂಬುಲೆನ್ಸ್‌ವೊಂದು (Ambulence) ಮೂರು ಕಾರು ಮತ್ತು ಒಂದು ಬೈಕ್‌ಗೆ ಸರಣಿಯಾಗಿ ಡಿಕ್ಕಿ (Accident) ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬ್ಯಾಟರಾಯನಪುರ (Byatarayanpura) ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ.

ಶುಕ್ರವಾರ ರಾತ್ರಿ 10:45ರ ಸುಮಾರಿಗೆ ಸರಣಿ ಅಪಘಾತ ನಡೆದಿದೆ. ಅಂಬುಲೆನ್ಸ್ ಚಾಲಕ ಸುಮಂತ್ ಮಾರ್ಕೆಟ್‌ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಬರುತ್ತಿದ್ದ ಸಂದರ್ಭ ನಿಯಂತ್ರಣ ಸಿಗದೆ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ವೇಳೆ ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದನ್ನೂ ಓದಿ: ಗಾಳಿಯಲ್ಲಿ ಹಾರಿ ಮರಕ್ಕೆ ಅಪ್ಪಳಿಸಿದ ಕಾರು – ಅಮೆರಿಕದಲ್ಲಿ ಮೂವರು ಭಾರತದ ಮಹಿಳೆಯರು ಸಾವು

ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಚಾಲಕ ಸುಮಂತ್‌ನನ್ನು ಬಂಧಿಸಿದ್ದಾರೆ. ಈ ಕುರಿತು ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಹೆಲಿಕಾಪ್ಟರ್‌ ಒಳಗೆ ಆಯತಪ್ಪಿ ಬಿದ್ದ ದೀದಿ- ಸಣ್ಣಪುಟ್ಟ ಗಾಯ

Share This Article