ತುಮಕೂರಿನಲ್ಲಿ ಸರಣಿ ಅಪಘಾತ – ಇಬ್ಬರು ಸಾವು, ಹಲವರಿಗೆ ಗಾಯ

Public TV
1 Min Read

ತುಮಕೂರು: ಟಾಟಾ ಏಸ್, ಕ್ಯಾಂಟರ್ ಹಾಗೂ ಖಾಸಗಿ ಬಸ್ ಮಧ್ಯೆ ಸರಣಿ ಅಪಘಾತ (Accident) ನಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ತುಮಕೂರು (Tumakuru) ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ.

ಚಿಕ್ಕನಹಳ್ಳಿ ಬಳಿ ಶನಿವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಟಾಟಾ ಏಸ್‌ನಲ್ಲಿದ್ದ ಇಬ್ಬರು ದುರ್ಮರಣ ಹೊಂದಿದ್ದಾರೆ. ಮೃತರನ್ನು ಕಲಬುರಗಿ (Kalaburagi) ಜಿಲ್ಲೆಯ ಅರಳಗುಡಿ ಗ್ರಾಮದ ಭೀಮಾಬಾಯಿ (70) ಹಾಗೂ ಮಹಾಂತಪ್ಪ (50) ಎಂದು ಗುರುತಿಸಲಾಗಿದೆ. ಮೃತರು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಲ್ಲಿ (Bengaluru) ವಾಸವಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಇನ್ನೊಬ್ಬನ ಮೇಲೆ ದ್ವೇಷ ತೀರಿಸಿಕೊಳ್ಳಲು ಆತ್ಮೀಯ ಸ್ನೇಹಿತನನ್ನೇ ಕೊಂದ ಕಿರಾತಕ!

ಚಿಕ್ಕನಹಳ್ಳಿ (Chikkanahalli) ಬಳಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ವಾಹನ ದಟ್ಟಣೆ ಉಂಟಾಗಿದ್ದು, ಈ ವೇಳೆ ಮುಂದೆ ಹೋಗುತ್ತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ನಂತರ ಹಿಂಬಂದಿಯಿಂದ ಟಾಟಾ ಏಸ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ಕಳ್ಳಂಬೆಳ್ಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪತ್ನಿಯನ್ನು ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಪತಿ!

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್