ಬೆಳಗಾವಿ ಹೈವೇಯಲ್ಲಿ ಸರಣಿ ಅಪಘಾತ – ಅದೃಷ್ಟವಶಾತ್‌ ಪ್ರಾಣಹಾನಿ ಇಲ್ಲ

1 Min Read

ಬೆಳಗಾವಿ: ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಸರಣಿ ಅಪಘಾತ (Serial Accident) ಸಂಭವಿಸಿ ಭಾರೀ ಅನಾಹುತ ತಪ್ಪಿದ ಘಟನೆ ಬೆಳಗಾವಿ ತಾಲೂಕಿನ ಬಡೇಕೊಳ್ಳಮಠದ ಬಳಿ ನಡೆದಿದೆ.

- Advertisement -

ಐದು ವಾಹನಗಳ ನಡುವೆ ಸರಣಿ ಅಪಘಾತವಾಗಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಬಟ್ಟೆತುಂಬಿದ ಕಂಟೇನರ್ ವಾಹನ ಮುಗುಚಿ ಬಿದ್ದ ಪರಿಣಾಮ ಹಿಂದುಗಡೆ ಬರುತ್ತಿದ್ದ ತೈಲ ತುಂಬಿದ ಟ್ಯಾಂಕರ್‌ ಸರ್ವೀಸ್ ರಸ್ತೆ ದಾಟಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಮೀನಿಗೆ ನುಗ್ಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 40 ಸಾವಿರದ ಉದ್ಯೋಗಕ್ಕೆ ಗುಡ್‌ಬೈ – ಊರಿನಲ್ಲಿ ಅಡಿಕೆ ಕೊನೆಕಾರನ ಕೆಲಸಕ್ಕೆ ಜೈ

- Advertisement -

ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಲ್ಲದೇ ಸಾರಿಗೆ ಬಸ್, ಕಾರು ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಐತಿಹಾಸಿಕ ಲಕ್ಕುಂಡಿಯಲ್ಲಿ ಅಪರೂಪದ ತ್ರಿಮುಖ ನಾಗಶಿಲೆ ಪತ್ತೆ

- Advertisement -

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Share This Article