ಸುಮನಹಳ್ಳಿ ಫ್ಲೈ ಓವರ್ ಮೇಲೆ 7 ವಾಹನಗಳ ನಡುವೆ ಸರಣಿ ಅಪಘಾತ – ಹಲವರಿಗೆ ಗಾಯ

1 Min Read

ಬೆಂಗಳೂರು: ಸುಮನಹಳ್ಳಿ ಫ್ಲೈ ಓವರ್ (Sumanahalli Flyover) ಮೇಲೆ‌ ಸರಣಿ ಅಪಘಾತ (Serial Accident) ಸಂಭವಿಸಿದೆ. ಕಾರು ಲಾರಿ ಸೇರಿದಂತೆ 7-8 ವಾಹನಗಳ ನಡುವೆ ಅಪಘಾತ ನಡೆದಿದೆ. ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳಕ್ಕೆ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.

ಮಳೆಯಿಂದ ಫ್ಲೈ ಓವರ್ ಮೇಲೆ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಇದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ವಾಹನಗಳನ್ನು ತೆರವುಗೊಳಿಸುವ ಕಾರ್ಯ ಮಾಡುತ್ತಿದ್ದಾರೆ. ಇದನ್ನೂ ಓದಿ: ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ. ಮಳೆಯ ಸಂದರ್ಭದಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕಿದೆ. ಇದನ್ನೂ ಓದಿ: ಕೌಟುಂಬಿಕ ಕಲಹ – ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

Share This Article