ವಿದ್ಯುತ್ ಶಾರ್ಟ್‌ ಸರ್ಕ್ಯೂಟ್; ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನ

Public TV
0 Min Read

ಕಾರವಾರ: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂರ್ಟ್‌ನಿಂದ ಕೊಟ್ಟಿಗೆಯಲ್ಲಿದ್ದ 7 ಹೋರಿಗಳ ಸಜೀವ ದಹನವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇಮಗಾರದಲ್ಲಿ ನಡೆದಿದೆ.

ಹೇಮಗಾರದ ಮಹೇಶ್ ಹೆಗಡೆ ಎಂಬವರ ಮನೆಯಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಇಂದು ಸಂಜೆ ವೇಳೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.

ಮನೆಯಲ್ಲಿದ್ದ ವೈರ್‌ಗೆ ಶಾರ್ಟ್ ಸರ್ಕ್ಯೂರ್ಟ್‌ನಿಂದಾಗಿ ಕಿಡಿ ಹೊತ್ತಿದ್ದು, ಕೊಟ್ಟಿಗೆಯ ಅಟ್ಟದ ಮೇಲಿರುವ ಹುಲ್ಲಿಗೆ ಈ ಕಿಡಿ ತಾಗಿ ಬೆಂಕಿ ಹತ್ತಿದೆ. ಹುಲ್ಲಿಗೆ ಬಿದ್ದ ಬೆಂಕಿ ಆವರಿಸಿ ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನವಾಗಿದೆ. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article