– ಹಲವರು ಅವಶೇಷಗಳ ಅಡಿ ಸಿಲುಕಿರುವ ಶಂಕೆ
ನವದೆಹಲಿ: ಈಶಾನ್ಯ ದೆಹಲಿಯ ಸೀಲಾಮ್‌ಪುರದಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು (Building Collapses) ಬಿದ್ದ ಅವಘಡ ಸಂಭವಿಸಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ದೆಹಲಿಯ ವೆಲ್ಕಮ್ ಪ್ರದೇಶದಲ್ಲಿರುವ (Delhi’s Welcome area) ಜನತಾ ಮಜ್ದೂರ್ ಕಾಲೋನಿಯಲ್ಲಿ ಶನಿವಾರ ಜುಲೈ 12 ರಂದ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈಗಾಗಲೇ 14 ತಿಂಗಳ ಮಗು ಸೇರಿ 8 ಮಂದಿಯನ್ನ ರಕ್ಷಿಸಲಾಗಿದೆ. ಇನ್ನೂ 6ಕ್ಕೂ ಹೆಚ್ಚು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, 7 ಅಗ್ನಿಶಾಮಕ ದಳದವರಿಂದ (Fire Tenders) ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: Air India Crash | 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಆಗದಿದ್ದೇ ದುರಂತಕ್ಕೆ ಕಾರಣ – AAIB ಪ್ರಾಥಮಿಕ ವರದಿ ಬಹಿರಂಗ
ಬೆಳಗ್ಗೆ 7 ಗಂಟೆಗೆ ಕಟ್ಟಡ ಕುಸಿದ ಬಗ್ಗೆ ನಮಗೆ ಕರೆ ಬಂದಿದೆ. ಹಲವು ತಂಡಗಳು ಕಾರ್ಯನಿರ್ವಹಿಸುತ್ತಿವೆ. ಏಳು ಅಗ್ನಿಶಾಮಕ ಟೆಂಡರ್‌ಗಳು ಸ್ಥಳದಲ್ಲಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಸಿಲುಕಿರುವವರನ್ನು ರಕ್ಷಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ರಕ್ಷಣಾ ತಂಡಗಳು ಒಟ್ಟಾಗಿ ಕೆಲಸ ಮಾಡುತ್ತಿವೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಜೋಡಿಗೆ ನೇಗಿಲು ಕಟ್ಟಿ ಎತ್ತುಗಳಂತೆ ಉಳುಮೆ ಮಾಡಿಸಿ ಚಿತ್ರಹಿಂಸೆ
ದೆಹಲಿಯಲ್ಲಿ ಶುಕ್ರವಾರವೂ ಕಟ್ಟಡ ಕುಸಿದಿತ್ತು. ವಾರದಲ್ಲಿ 2 ಭೂಕಂಪ ಸಂಭವಿಸಿತ್ತು. ಇದೀಗ ಶನಿವಾರವೂ ಕಟ್ಟಡ ಕುಸಿತ ಆಗಿದ್ದು, ಸಾಲು ಸಾಲು ಅನಾಹುತಗಳು ರಾಷ್ಟ್ರರಾಜಧಾನಿಯಲ್ಲಿ ಸಂಭವಿಸುತ್ತಿದ್ದು, ಜನರ ನಿದ್ದೆಗೆಡುವಂತೆ ಮಾಡಿದೆ. ಇದನ್ನೂ ಓದಿ: ಮೋದಿ ನಿವೃತ್ತಿಗೆ ಮೋಹನ್ ಭಾಗವತ್ ಸೂಚನೆ? – ವಿಪಕ್ಷಗಳಿಂದ ಬಿಜೆಪಿಗೆ ಪ್ರಶ್ನೆಗಳ ಸುರಿಮಳೆ