ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

2 Min Read

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ (Sexual assault) ಎಸಗಿದ ಆರೋಪದ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ. ದಂಡ ವಿಧಿಸಿ ಮಂಡ್ಯ ಅಧಿಕ ಸೆಷನ್ಸ್ ಮತ್ತು 2ನೇ ತ್ವರಿತಗತಿ ನ್ಯಾಯಾಲಯ (Court) ವಿಶೇಷ ನ್ಯಾಯಾಧೀಶ ಬಿ.ದಿಲೀಪ್ ಕುಮಾರ್ ಅವರು ತೀರ್ಪು ನೀಡಿದ್ದಾರೆ.

ಮಂಡ್ಯ ನಗರ ತಾವರಗೆರೆ ಬಡಾವಣೆ ನಿವಾಸಿ ವಾಯಿದ್ ಇಕ್ಬಾಲ್ ಅವರ ಮಗ ಅಖೀಬ್ ಆಲಂ ಉ. ಶೇಖ್ ಅಖೀಬ್ ಆಲಂ ಶಿಕ್ಷೆಗೆ ಒಳಗಾದ ಆರೋಪಿ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ

ಬಾಲಕಿ ಶಾಲೆಗೆ ಹೋಗುವಾಗ ಮತ್ತು ಬರುವಾಗ ಆಗಾಗ್ಗೆ ಹೋಗಿ ಭೇಟಿ ಮಾಡಿ, ಪುಸಲಾಯಿಸಿ ನಿನ್ನನ್ನು ಪ್ರೀತಿಸುತ್ತಿದ್ದು, ನೀನು ನನ್ನನ್ನು ಪ್ರೀತಿಸದೇ ಹೋದರೆ ಕೈಯನ್ನು ಕೊಯ್ದುಕೊಳ್ಳುತ್ತೇನೆ ಹಾಗೂ ಅತ್ಯಹತ್ಯೆ ಮಾಡಿಕೊಳ್ಳುತ್ತೇನೆಂದು ಹೆದರಿಸಿ ಕಳೆದ 2023ರ ಜ.27ರಂದು ಆಕೆಯನ್ನ ಕಾರಿನಲ್ಲಿ ಕೂರಿಸಿಕೊಂಡು ಶ್ರೀರಂಗಪಟ್ಟಣ ತಾಲ್ಲೂಕಿನ ಕರಿಘಟ್ಟ ಬೆಟ್ಟದ ದೇವಸ್ಥಾನದ ಹಿಂಭಾಗದಲ್ಲಿ ಕಾರನ್ನ ನಿಲ್ಲಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ವಿಚಾರವನ್ನು ನಿಮ್ಮ ತಂದೆ-ತಾಯಿಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ.

ಇದರಿಂದ ಮನನೊಂದ ಬಾಲಕಿ ಮನೆಯ ಕೊಠಡಿಯಲ್ಲಿ ಫ್ಯಾನ್‌ಗೆ ವೇಲಿನಿಂದ ನೇಣು ಬಿಗಿದುಕೊಂಡು ಮೃತಪಟ್ಟಿದ್ದಳು. ಆರೋಪಿತನಿಂದ ಬಾಲಕಿಯು ಗರ್ಭಿಣಿಯಾಗಿರುವುದು ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟ ಹಿನ್ನೆಲೆಯಲ್ಲಿ ಈ ಸಂಬಂಧ ಮಂಡ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ತನಿಖಾಧಿಕಾರಿಯಾದ ಮಹಿಳಾ ಪೊಲೀಸ್ ಠಾಣಾ ಇನ್‌ಸ್ಪೆಪೆಕ್ಟರ್ ಎಚ್.ಆನಂದಕುಮಾರ್ ಅವರು ತನಿಖೆಯನ್ನು ಕೈಗೊಂಡು, ಸೂಕ್ತ ಸಾಕ್ಷಾಧಾರಗಳನ್ನ ಸಂಗ್ರಹಿಸಿ ನಿಗಧಿತ ಸಮಯದಲ್ಲಿ ತನಿಖೆಯನ್ನು ಪೂರ್ಣಗೊಳಿಸಿ, ಆರೋಪಿ ವಿರುದ್ದ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಇದನ್ನೂ ಓದಿ: 11 ದಿನಗಳಲ್ಲಿ ಹಣ ಡಬಲ್‌ ಆಗುತ್ತೆ ಅಂತ ಆಸೆಗೆ ಬಿದ್ದು 12 ಕೋಟಿ ಕಳ್ಕೊಂಡ ವೈದ್ಯ

ಅಂದಿನಿಂದ ಹೆಚ್ಚುವರಿ ಸೆಷನ್ಸ್‌ ಮತ್ತು ತ್ವರಿತಗತಿ 2ನೇ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಬಿ.ದಿಲೀಪ್ ಕುಮಾರ್ ಅವರು ಆರೋಪಿ ಅಖೀಬ್ ಆಲಂ ಉ. ಶೇಖ್ ಅಖೀಬ್ ಆಲಂಗೆ 20 ವರ್ಷ ಕಾರಾಗೃಹ ಶಿಕ್ಷೆ ಹಾಗೂ 7 ಲಕ್ಷ ರೂ. ದಂಡ ವಿಧಿಸಿ ತೀರ್ಪಿತ್ತಿದ್ದಾರೆ. ಅಭಿಯೋಜನೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಹೆಬ್ಬಕವಾಡಿ ನಾಗರಾಜು ಅವರು ವಾದ ಮಂಡಿಸಿದ್ದರು. ಇದನ್ನೂ ಓದಿ: ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Share This Article