ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ

Public TV
2 Min Read

ಬೆಂಗಳೂರು: ಪ್ರತಿಷ್ಠಿತ ಮಾಲ್‌ವೊಂದರಲ್ಲಿ ಯುವತಿಗೆ ಲೈಂಗಿಕ ಕಿರುಕುಳ (Sexual Harassment) ನೀಡಿದ ಪ್ರಕರಣ ಮಾಸುವ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ದಿನದಿಂದ ದಿನಕ್ಕೆ ಲೈಂಗಿಕ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದೆ. ಅದೇ ರೀತಿ ಹಗಲೊತ್ತಲ್ಲಿ, ಜನಜಂಗುಳಿಯಲ್ಲೇ ಕಾಮುಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ತುಂಬಿ ತುಳುಕುತ್ತಿದ್ದ ಮೆಟ್ರೋದಲ್ಲಿ (Namma Metro)  ಯುವತಿಗೆ (Young Woman) ಲೈಂಗಿಕ ಕಿರುಕುಳ ನೀಡಿದ್ದು, ಕಿಡಿಗೇಡಿಯ ಈ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ (Social Media) ಭಾರೀ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಯುವತಿಗೆ ನ್ಯಾಯ ಒದಗಿಸಿ ಕಿಡಿಗೇಡಿಗೆ ತಕ್ಕ ಶಾಸ್ತಿ ಮಾಡುವಂತೆ ಆಗ್ರಹಿಸಲಾಗಿದೆ. ಇದನ್ನೂ ಓದಿ: ಧೂಳು ಹಿಡಿದ ಲಾರಿಯಲ್ಲಿ ಬೆಲೆ ಬಾಳುವ ಔಷಧಿಗಳ ಸಂಗ್ರಹ

ಆಗಿದ್ದೇನು?
ಸೋಮವಾರ ಬೆಳಗ್ಗೆ ಸುಮಾರು 8:30ರ ಸುಮಾರಿನಲ್ಲಿ ಸದಾ ಜನಜಂಗುಳಿ ಇರುವ ಮೆಜೆಸ್ಟಿಕ್ ಮೆಟ್ರೋದಲ್ಲಿ ಘಟನೆ ನಡೆದಿದೆ. ಯುವತಿ ಪ್ರತಿ ದಿನ ಕಾಲೇಜಿಗೆ ಬಸ್‌ನಲ್ಲೇ ತೆರಳುತ್ತಿದ್ದಳು. ಆದರೆ ಸೋಮವಾರ ಬೆಳಗ್ಗೆ 8:30ರ ಸುಮಾರಿಗೆ ಮೆಟ್ರೊದಲ್ಲಿ ಪ್ರಯಾಣಿಸಲು ಮೆಜೆಸ್ಟಿಕ್‌ಗೆ ಬಂದಿದ್ದಳು. ಮೆಟ್ರೊ ಏರುವಾಗ ದಟ್ಟಣೆಯಿತ್ತು. ಮೆಟ್ರೋ ಹತ್ತಿದ ನಂತರ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಹಿಂದಿನಿಂದ ಆಕೆಯನ್ನು ಸ್ಪರ್ಶಿಸಿದ್ದಾನೆ. ಆರಂಭದಲ್ಲಿ ಆಕೆಗೆ ಏನಾಗುತ್ತಿದೆ ಎಂಬ ಅರಿವು ಇರಲಿಲ್ಲ. ಅರಿವಾದಾಗ ಸಹಾಯಕ್ಕೆ ಕೋರಿದ್ದರೂ ಮೆಟ್ರೊ ಸಹಪ್ರಯಾಣಿಕರು ನೆರವಿಗೆ ಬಂದಿರಲಿಲ್ಲ. ಆಕೆ ಅತ್ತು ಕಿರುಚಿದರೂ ಯಾರೂ ಆಕೆಯ ಸಹಾಯಕ್ಕೆ ಬರಲೇ ಇಲ್ಲ. ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ವಿಚಾರ ಬಹಿರಂಗ ಪಡಿಸಿದ್ದು, ತಪ್ಪಿತಸ್ಥನ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕಲ್ಲಿದ್ದಲು ಕಳ್ಳತನ ಕೇಸ್‌ – ಇದ್ದ ಮೂವರಲ್ಲಿ ಕಳ್ಳ ಯಾರು? ವೈಟಿಪಿಎಸ್ ಅಧಿಕಾರಿಗಳು ಹೇಳೋದು ಏನು?

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಆರ್‌ಸಿಎಲ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಬಿಎಂಆರ್‌ಸಿಎಲ್ ಅಧಿಕಾರಿ ಯಶವಂತ್ ಚೌಹಾಣ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಯಾವ ಟೈಂ, ಯಾವ ಟ್ರೈನ್ ಅಂತಾ ಗೊತ್ತಾಗಬೇಕಿದೆ. ಈಗಾಗಲೇ ಸಿಸಿಟಿವಿಯಲ್ಲಿ ಪರಿಶೀಲನೆ ಮಾಡುತ್ತಿದ್ದೇವೆ. ಇದುವರೆಗೂ ಈ ಕೇಸ್ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಆದರೂ ನಾವು ಕ್ರಮ ವಹಿಸಿ ಪರಿಶೀಲನೆ ಮಾಡುತ್ತಿದ್ದೇವೆ. ಇದರ ಬಗ್ಗೆ ವಿಚಾರಿಸಿ ಹೇಳುತ್ತೇವೆ. ಶೀಘ್ರದಲ್ಲೇ ಪತ್ತೆ ಮಾಡುತ್ತೇವೆ ಎಂದರು. ಇದನ್ನೂ ಓದಿ: ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಕಸರತ್ತು – ಅಧ್ಯಕ್ಷರ ಮೊದಲ ಪಟ್ಟಿ ಫೈನಲ್: ಸಭೆಯಲ್ಲಿ ಏನಾಯ್ತು?

Share This Article