ವಾಕಿಂಗ್ ಮಾಡುವ ವೇಳೆ ಶರ್ಟ್ ಎಳೆದು ಉದ್ಯಮಿ ಮಗಳಿಗೆ ಲೈಂಗಿಕ ಕಿರುಕುಳ!

Public TV
1 Min Read

ಬೆಂಗಳೂರು: ನಗರದಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ಉದ್ಯಮಿ ಮಗಳಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.

ಎಸ್‍ಎಫ್‍ಎಸ್ ಯಲಹಂಕ ನ್ಯೂಟೌನ್ ಬಳಿ ಶನಿವಾರ ಈ ಘಟನೆ ನಡೆದಿದ್ದು, ಮನೆ ಬಳಿ ವಾಕಿಂಗ್ ಮಾಡುವ ವೇಳೆ ವ್ಯಕ್ತಿಯೊಬ್ಬ ಶರ್ಟ್ ಎಳೆದು ಅಸಭ್ಯವಾಗಿ ವರ್ತಿಸಿದ್ದಾನೆ.

ಯುವತಿ ಶನಿವಾರ ರಾತ್ರಿ ಸುಮಾರು 9 ಗಂಟೆಗೆ ಊಟ ಮಾಡಿ ಮನೆಯ ಹೊರಭಾಗದಲ್ಲಿ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಬಂದು ಆಕೆಯ ಶರ್ಟ್ ಎಳೆದು ಅಸಭ್ಯವಾಗಿ ವರ್ತಿಸಿದ್ದಾನೆ. ಘಟನೆಯಿಂದ ಯುವತಿ ಗಾಬರಿಗೊಂಡು ಕಿರುಚಿಕೊಂಡಿದ್ದಾರೆ. ಯುವತಿ ಕಿರುಚುತ್ತಿದ್ದಂತೆ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ.

ಈ ಘಟನೆ ಸಂಬಂಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ 354b ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *