ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಆದಿ ರಾಜೀನಾಮೆ

Public TV
1 Min Read

ಬೆಂಗಳೂರು: ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನಾ ಎನ್‌ಕೆ ಶಾಫಿ ಸಅದಿ (Shafi Saadi) ರಾಜೀನಾಮೆ ನೀಡಿದ್ದಾರೆ. ಶಾಫಿ ಸಅದಿ ಅವರು ಇಂದು ರಾಜೀನಾಮೆ ನೀಡಿದ್ದು ಸರ್ಕಾರ ಅಂಗೀಕರಿಸಿದೆ.

ಶಾಫಿ ಸಅದಿ ಅವರನ್ನು ಬಿಜೆಪಿ ಸರ್ಕಾರದ (BJP Government) ನೇಮಿಸಿತ್ತು. ಕಾಂಗ್ರೆಸ್‌ ಸರ್ಕಾರ ಆಡಳಿತಕಕ್ಕೆ ಬಂದ ಬಳಿಕ ಮೌಲಾನಾ ಸಅದಿ ಮತ್ತು ಸದಸ್ಯರಾದ ಮೀರ್ ಅಜರ್ ಹುಸೇನ್, ಜಿ. ಯಾಕೂಬ್ ಮತ್ತು ಐಎಎಸ್ ಅಧಿಕಾರಿ ಜೆಹೆರಾ ನಸೀಮ್ ಅವರ ನಾಮನಿರ್ದೇಶನಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ರಾಜ್ಯ ಸರ್ಕಾರವು ಮೇ 22 ರಂದು ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಒಂದೇ ದಿನ ಈ ಆದೇಶವನ್ನು ರದ್ದುಗೊಳಿಸಿತ್ತು.  ಇದನ್ನೂ ಓದಿ: ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಬೀದಿಗಿಳಿಯುತ್ತೇವೆ: ಸರ್ಕಾರಕ್ಕೆ ಗುತ್ತಿಗೆದಾರರ ಸಂಘ ಎಚ್ಚರಿಕೆ

 

ಕರ್ನಾಟಕದ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮೌಲಾನಾ ಸಅದಿ ಅವರು ಉಪಮುಖ್ಯಮಂತ್ರಿ ಸ್ಥಾನವನ್ನು ಮುಸ್ಲಿಂ ಸಮುದಾಯದ ವ್ಯಕ್ತಿಗೆ ನೀಡಬೇಕು ಎಂದು ಒತ್ತಾಯಿಸಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್