‘ಹಯ್ಯೋಡಾ’ ಹಾಡಿಗೆ ಸಖತ್ ಸ್ಟೆಪ್ ಹಾಕಿದ ಶಾರುಖ್ ಖಾನ್

By
1 Min Read

ಲವು ಪ್ರೇಮಕಥೆಯಾಧಾರಿತ ಚಿತ್ರಗಳು ಮತ್ತು ಹಾಡುಗಳಲ್ಲಿ ಅಭಿನಯಿಸುವ ಮೂಲಕ ‘ಕಿಂಗ್ ಆಫ್ ರೊಮ್ಯಾನ್ಸ್’ ಎಂಬ ಬಿರುದಿಗೆ ಭಾಜನರಾದವರು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ (Shah Rukh Khan). ಆ ಬಿರುದನ್ನು ನಿಜಗೊಳಿಸುವಂತೆ ಅವರು ಇನ್ನೊಮ್ಮೆ ಒಂದು ಅದ್ಭುತ ಗೀತೆಯೊಂದಿಗೆ (Song) ವಾಪಸ್ಸಾಗಿದ್ದಾರೆ.

‘ಜವಾನ್’ (Jawan) ಚಿತ್ರದ ‘ಹಯ್ಯೋಡಾ’ (Hayoda) ಎಂಬ ಹಾಡು ಇಂದು ಬಿಡುಗಡೆಯಾಗಿದ್ದು, ಭಾರತೀಯ ಚಿತ್ರರಂಗದದಲ್ಲೇ ಹಲವು ರೊಮ್ಯಾಂಟಿಕ್ ಮತ್ತು ಮಧುರಗೀತೆಗಳಿಗೆ ಜನಪ್ರಿಯರಾದ ಶಾರುಖ್ ಖಾನ್ ಹೆಜ್ಜೆ ಹಾಕಿದ್ದಾರೆ. ಈ ಹಾಡನ್ನು ಅನಿರುದ್ಧ್ ರವಿಚಂದರ್ ಸಂಯೋಜಿಸಿದ್ದು, ಅನಿರುದ್ಧ್ ಮತ್ತು ಪ್ರಿಯಾ ಮಾಲಿ ಹಾಡಿದ್ದಾರೆ. ಈ ಸುಮಧುರ ಹಾಡಿಗೆ ವಿವೇಕ್ ಸಾಹಿತ್ಯ ರಚಿಸಿದ್ದಾರೆ. ಇದನ್ನೂ ಓದಿ:Bigg Boss Kannada 10: ಬಿಗ್‌ ಬಾಸ್‌ ಶೋನಲ್ಲಿ ಯಾರೆಲ್ಲಾ ಇದ್ದಾರೆ?

ಇದೇ ಮೊದಲ ಬಾರಿಗೆ ತೆರೆಯ ಮೇಲೆ ಒಟ್ಟಾಗಿ ಕಾಣಿಸಿಕೊಂಡಿರುವ ಶಾರುಖ್ ಖಾನ್ ಮತ್ತು ನಯನತಾರಾ, ತೆರೆಯ ಮೇಲೆ ಅದ್ಭುತವಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರೂ ತಮ್ಮ ಅಭಿನಯದಿಂದ ನೋಡುಗರನ್ನು ಮಂತ್ರಮುಗ್ಧರನ್ನಾಗಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಇನ್ನು, ಭಾರತೀಯ ಚಿತ್ರರಂಗದ ಜನಪ್ರಿಯ ಕೊರಿಯೋಗ್ರಾಫರ್ ಆಗಿರುವಂತಹ ಫರಾ ಖಾನ್ ನೃತ್ಯ ನಿರ್ದೇಶನ ಮಾಡಿದ್ದಾರೆ.

 

‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಸಂಸ್ಥೆಯಡಿ ಗೌರಿ ಖಾನ್ ನಿರ್ಮಿಸಿದರೆ, ಗೌರವ್ ವರ್ಮಾ ಸಹನಿರ್ಮಾಪಕರಾಗಿದ್ದಾರೆ. ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕ ಅಟ್ಲಿ ನಿರ್ದೇಶಿಸಿರುವ ಈ ಚಿತ್ರವು ಜಗತ್ತಿನಾದ್ಯಂತ ಸೆಪ್ಟೆಂಬರ್ 7ರಂದು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್