ಮೈತ್ರಿ ಸರ್ಕಾರದ ಭವಿಷ್ಯ ಎರಡು ದಿನಗಳಲ್ಲಿ ಗೊತ್ತಾಗಲಿದೆ: ಶಾಮನೂರು

Public TV
1 Min Read

ದಾವಣಗೆರೆ: ಮೈತ್ರಿ ಸರ್ಕಾರದ ಬಗ್ಗೆ ಇನ್ನೆರಡು ದಿನಗಳಲ್ಲಿ ಗೊತ್ತಾಗಲಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಮೈತ್ರಿ ಪಕ್ಷದ ಅಳಿವು ಉಳಿವಿನ ಬಗ್ಗೆ ಸುಳಿವು ಬಿಟ್ಟು ಕೊಟ್ಟಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕೂಟಕ್ಕೆ ಕಡಿಮೆ ಸ್ಥಾನಗಳು ಬಂದಿದೆ. ಜನಾದೇಶ ಯಾರು ಏನು ಮಾಡಲು ಸಾಧ್ಯವಿಲ್ಲ ಎಂದರು. ಅಲ್ಲದೇ ಕಡಿಮೆ ಸ್ಥಾನಗಳು ಬಂದಿದ್ದಕ್ಕೆ ಮೈತ್ರಿ ಸರ್ಕಾರ ಉಳಿಯುತ್ತಾ ಎನ್ನುವ ಪ್ರಶ್ನೆಗೆ ಉತ್ತರಿಸಿ, ಎರಡು ದಿನಗಳಲ್ಲಿ ಎಲ್ಲವೂ ನಿಮಗೆ ಗೊತ್ತಾಗಲಿದೆ ಎಂದರು. ಇದೇ ವೇಳೆ ಸಿದ್ದರಾಮಯ್ಯ ಅವರ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಸಿದ್ದರಾಮಯ್ಯ ಬಗ್ಗೆ ನಾನು ಏನು ಮಾತನಾಡುವುದಿಲ್ಲ ಎಂದು ಹೇಳಿ ಮೌನಕ್ಕೆ ಶರಣಾದರು.

ಲೋಕಸಭಾ ಚುನಾವಣೆಗೂ ಮುನ್ನ ಪಕ್ಷದ ಟಿಕೆಟ್ ನೀಡಿದ್ದರೂ ಕೂಡ ಶಾಮನೂರು ಅವರು ಸ್ಪರ್ಧೆ ಮಾಡಲು ನಿರಾಕರಿಸಿದ್ದರು. ವಯಸ್ಸಿನಾ ಕಾರಣ ನೀಡಿ ಈ ಹಿಂದೆ ಟಿಕೆಟ್ ನೀಡಿರಲಿಲ್ಲ. ಆದರೆ ನನಗೆ ಹೇಳದೆಯೇ ಹೈಕಮಾಂಡ್ ನನಗೆ ಸಪ್ರೈರ್ಸ್ ಕೊಟ್ಟಿದೆ ಎಂದು ಪರೋಕ್ಷವಾಗಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. ಆ ಬಳಿಕ ಕಾಂಗ್ರೆಸ್ ಪಕ್ಷ ಎಚ್‍ಬಿ ಮಂಜಪ್ಪ ಅವರಿಗೆ ಟಿಕೆಟ್ ನೀಡಿತ್ತು. ಕ್ಷೇತ್ರದಲ್ಲಿ 4,82,683 ಮತ ಪಡೆದಿದ್ದ ಮಂಜಪ್ಪ ಅವರು 6,51,353 ಮತ ಪಡೆದ ಬಿಜೆಪಿ ಅಭ್ಯರ್ಥಿ ಜಿಎಂ ಸಿದ್ದೇಶ್ವರ ಅವರ ವಿರುದ್ಧ ಸೋಲುಂಡಿದ್ದಾರೆ. ಕ್ಷೇತ್ರದಲ್ಲಿ ಜಿಎಂ ಸಿದ್ದೇಶ್ವರ ಅವರು 5ನೇ ಬಾರಿಗೆ ಸಂಸದರಾಗಿ ಆಯ್ಕೆ ಆಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *