ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ವರನಿಂದ ಅವಮಾನ!

Public TV
1 Min Read

ಮಂಗಳೂರು: ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅವಮಾನ ಮಾಡಿದ ಘಟನೆ ನಡೆದಿದೆ.

ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದಲ್ಲಿ ಮದುವೆಯ ದಿನ ಕೊರಗಜ್ಜನ ವೇಷಭೂಷಣ ಧರಿಸಿ ಮದುಮಗ ಕುಣಿದಿದ್ದು, ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಕೂಡ ಆಗುತ್ತಿದೆ.

ಉಪ್ಪಳದ ಯುವಕನ ಜೊತೆ ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ನಿಶ್ಚಯವಾಗಿತ್ತು. ವಧುವಿನ ಮನೆಗೆ ರಾತ್ರಿ ವರನ ಸ್ನೇಹಿತರ ಬಳಗ ಆಗಮಿಸಿತ್ತು. ಈ ವೇಳೆ ವರ ಕೊರಗಜ್ಜನ ವೇಷ-ಭೂಷಣ ಧರಿಸಿ ಬಂದಿದ್ದ. ತಲೆಗೆ ಅಡಿಕೆ ಹಾಳೆ ಟೋಪಿ, ಮುಖಕ್ಕೆ ಕಪ್ಪು ಬಣ್ಣ ಹಚ್ಚಿಕೊಂಡು ಬಂದಿದ್ದ.

ವರ ಹಾಗೂ ತಂಡ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿತ್ತು. ಈ ಕೃತ್ಯದಿಂದ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗಿದೆ ಎಂದು ಆಕ್ರೋಶ ಹೊರಬಿದ್ದಿದೆ. ಅಲ್ಲದೆ ಕೃತ್ಯವನ್ನು ಖಂಡಿಸಿರುವ ಆಡಿಯೋ ಸಹ ವೈರಲ್ ಆಗಿದೆ. ಇದನ್ನೂ ಓದಿ: ಸಚಿವ ಆರ್. ಅಶೋಕ್‍ಗೆ ಕೊರೊನಾ ಪಾಸಿಟಿವ್

ಮುಸ್ಲಿಂ ಸಮುದಾಯದ ವ್ಯಕ್ತಿ ಎನ್ನಲಾದವರ ಆಡಿಯೋ ವೈರಲ್ ಆಗಿದ್ದು, ಹುಚ್ಚಾಟ ಪ್ರದರ್ಶಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯ ಮಾಡಲಾಗಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಅಧಿಕಾರದಲ್ಲಿದ್ದಾಗ ನಿಮ್ಮ ಗಂಡಸ್ತನ ಎಲ್ಲಿ ಹೋಗಿತ್ತು: ರೇಣುಕಾಚಾರ್ಯ

Share This Article
Leave a Comment

Leave a Reply

Your email address will not be published. Required fields are marked *