ಬೆಂಗಳೂರು: ರಾಜ್ಯದ ಸಮಸ್ಯೆಗಳು ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡುವ ಬಗ್ಗೆ ಸಿಎಂ-ಡಿಸಿಎಂ ಜೊತೆ ರಾಹುಲ್ ಗಾಂಧಿ ಚರ್ಚೆ ಮಾಡಿದ್ದಾರೆ ಎಂದು ಸಚಿವ ಶರಣು ಪ್ರಕಾಶ್ ಪಾಟೀಲ್ (Sharanprakash Patil) ತಿಳಿಸಿದ್ದಾರೆ.
ನಿನ್ನೆ ಸಿಎಂ-ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಲೋಕಸಭೆ ವಿಪಕ್ಷ ನಾಯಕರು. ಜನವರಿ 28 ರಿಂದ ಬಜೆಟ್ ಅಧಿವೇಶನ ಶುರುವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ, ಡಿಸಿಎಂ ಜೊತೆ ರಾಹುಲ್ ಪ್ರತ್ಯೇಕ ಮಾತುಕತೆ – ತಿಂಗಳಾಂತ್ಯಕ್ಕೆ ದೆಹಲಿಗೆ ಬುಲಾವ್ ಭರವಸೆ
ರಾಜ್ಯದ ಅನೇಕ ವಿಷಯಗಳು, ಮನರೇಗಾ, ತೆರಿಗೆ, ಏಮ್ಸ್, ಯುಕೆಪಿ ಸೇರಿ ಅನೇಕ ವಿಷಯಗಳು ಸಂಸತ್‌ನಲ್ಲಿ ಚರ್ಚೆ ಆಗಬೇಕು. ಈ ವಿಚಾರಗಳ ಬಗ್ಗೆ ರಾಹುಲ್ ಗಾಂಧಿ ಜೊತೆ ಸಿಎಂ ಮಾತಾಡಿದ್ದಾರೆ ಅಷ್ಟೆ. ಅಲ್ಲಿ ರಾಜಕೀಯ ಮಾತಾಡಿರೋ ಬಗ್ಗೆ ನನಗೆ ಗೊತ್ತಿಲ್ಲ ಎಂದರು.
ತಮಿಳುನಾಡಿಗೆ ಪ್ರಯಾಣ ಬೆಳೆಸುವ ಹಿನ್ನೆಲೆಯಲ್ಲಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದರು. ಭೇಟಿ ಸಂದರ್ಭದಲ್ಲಿ ಪವರ್ ಶೇರಿಂಗ್ ವಿಚಾರವಾಗಿ ಇಬ್ಬರೂ ಮಾತನಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮೈಸೂರಿನಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ, ಡಿಸಿಎಂ

