ನವದೆಹಲಿ: ಕಾಂಗ್ರೆಸ್ ಹಾಗೂ ಸಂಸದ ಶಶಿ ತರೂರ್ (Shashi Throor) ಮಧ್ಯೆ ಫೈಟ್ ಮುಂದುವರಿದಿದೆ. ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಕ್ಕೆ ಇಟ್ಟಿರೋ ಸಂಸದ ಶಶಿ ತರೂರ್, ಪಕ್ಷದಲ್ಲೇ ಇದ್ದುಕೊಂಡು ಡ್ಯಾಮೇಜ್ ಮಾಡಿದ್ದಾರೆ. ಮಲಯಾಳಂ ಪತ್ರಿಕೆಯೊಂದಕ್ಕೆ ಬರೆದಿರೋ ಲೇಖನದಲ್ಲಿ ತುರ್ತು ಪರಿಸ್ಥಿತಿ ಪ್ರಸ್ತಾಪಿಸಿ, ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತುರ್ತು ಪರಿಸ್ಥಿತಿ ಹೇರಿಕೆ ಇಂದಿರಾ ಗಾಂಧಿ ಅವರ ಸರ್ವಾಧಿಕಾರಿ ವಿಧಾನ. ಇಂದಿರಾ ಮಗ ಸಂಜಯ್‌ಗಾಂಧಿ ಸಂತಾನ ಹರಣ ಹೆಸರಿನಲ್ಲಿ ನಡೆಸಿದ್ದ ದೌರ್ಜನ್ಯವನ್ನೂ ಉಲ್ಲೇಖಿಸಿ, ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಮಾಡಿದ್ದಾರೆ. ಬಡ ಗ್ರಾಮೀಣ ಭಾಗದಲ್ಲಿ ಹಿಂಸೆ, ಬಲವಂತದಿಂದ ಸಂತಾನಹರಣ ಮಾಡಿಸಲಾಗುತ್ತಿತ್ತು. ಕೊಳಗೇರಿಗಳನ್ನು ಕರುಣೆಯೇ ಇಲ್ಲದೆ ನೆಲಸಮಗೊಳಿಸಲಾಯಿತು. ಸಾವಿರಾರು ಜನರು ನಿರ್ವಸತಿಗರಾದರು ಎಂದು ಶಶಿತರೂರ್ ಬರೆದಿದ್ದಾರೆ. 1975ರಲ್ಲಿದ್ದ ಭಾರತವೇ ಬೇರೆ, ಈಗ ಇರುವ ಭಾರತವೇ ಬೇರೆ ಎನ್ನುವ ಮೂಲಕ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಶಶಿ ತರೂರ್ ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ನಮ್ಮಿಬ್ಬರನ್ನು ದೂರ ಮಾಡ್ತಾರೆ ಎಂಬ ಭಯದಲ್ಲಿ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ
ಇದು ಮತ್ತೆ ಕಾಂಗ್ರೆಸ್ ಹೈಕಮಾಂಡ್ ಕಣ್ಣು ಕೆಂಪಗಾಗಿಸಿದೆ. ಈ ಬಗ್ಗೆ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಕಿಡಿಕಾರಿದ್ದು, ಸ್ವಾತಂತ್ರ‍್ಯವು ಎಲ್ಲರಿಗೂ ಮುಕ್ತವಲ್ಲ. ವಿಶೇಷವಾಗಿ ಪರಭಕ್ಷಕಗಳು ದೇಶಭಕ್ತಿಯನ್ನು ಗರಿಗಳಾಗಿ ಧರಿಸಿದಾಗ ಸ್ವಾತಂತ್ರ‍್ಯ ಮುಕ್ತವಲ್ಲ ಅಂದಿದ್ದಾರೆ. ಇದನ್ನೂ ಓದಿ: ಕೊಯಮತ್ತೂರು ಬಾಂಬ್ ಬ್ಲಾಸ್ಟ್‌ನ ಪ್ರಮುಖ ಆರೋಪಿ ವಿಜಯಪುರದಲ್ಲಿ ಅರೆಸ್ಟ್