ಪೂಜೆ ಮಾಡಿ ಟಿವಿ ಆನ್‌ ಮಾಡಿದ್ದರು – ಸರೋಜಾದೇವಿಯವರ ಕೊನೆ ಕ್ಷಣ ಹೀಗಿತ್ತು

Public TV
1 Min Read

ಬೆಂಗಳೂರು: ಹಿರಿಯ ನಟಿ ಬಿ ಸರೋಜಾದೇವಿ (Saroja Devi) ಇಂದು ಬೆಳಗ್ಗೆ 9 ಗಂಟೆಯ ವೇಳೆಗೆ ವಿಧಿವಶರಾದರು ಎಂದು ಮ್ಯಾನೇಜರ್‌ ವಿಜಯ್‌ಕುಮಾರ್‌ ತಿಳಿಸಿದ್ದಾರೆ.

ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಸರೋಜಾದೇವಿ ಅವರು ಪ್ರತಿನಿತ್ಯ ಬೆಳಗ್ಗೆ ಎದ್ದು ಪೇಪರ್‌ ಓದುತ್ತಿದ್ದರು. ನಂತರ ಸ್ನಾನ ಮಾಡಿ ಪೂಜೆ ಮಾಡಿ ತಿಂಡಿ ತಿನ್ನುತ್ತಿದ್ದರು. ಇಂದು ಸ್ನಾನ ಮಾಡಿ ಪೂಜೆ ಮಾಡಿದ ಬಳಿಕ ಬೆಳಗ್ಗೆ 9 ಗಂಟೆಯ ವೇಳೆಗೆ ಟಿವಿ ಆನ್‌ ಮಾಡಿದ್ದರು. ಈ ವೇಳೆ ಅವರು ತುಂಬಾ ಸುಸ್ತಾಗಿದ್ದರು ಮತ್ತು ಅರೆಪ್ರಜ್ಞಾವಸ್ಥೆಗೆ ಹೋದರು. ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲೇ ಅವರು ಮೃತಪಟ್ಟಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ

 

ಸರೋಜಾ ದೇವಿ ಅವರ ತಾಯಿಯನ್ನು ಎಲ್ಲಿ ಮಣ್ಣು ಮಾಡಲಾಗಿದೆಯೋ ಅಲ್ಲೇ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಹಿರಿಯ ನಟಿ ಬಿ. ಸರೋಜಾದೇವಿ ನಿಧನ ಡಿಕೆಶಿ ಸಂತಾಪ

ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಮಂಗಳವಾರ ಅಂತ್ಯಕ್ರಿಯೆ ಮಾಡಲು ಕುಟುಂಬಸ್ಥರು ನಿರ್ಧಾರ ತೆಗೆದುಕೊಂಡಿದ್ದಾರೆ. ಈಗ ಮಲ್ಲೇಶ್ವರದಲ್ಲಿರುವ (Malleshwaram) ನಿವಾಸದಲ್ಲಿ ಮೃತದೇಹವನ್ನು ಇರಿಸಲಾಗಿದೆ. ಕಲಾವಿದರು,  ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡಿದವರು ನಿವಾಸಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

Share This Article