ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಸ್ಥಾಪಕರಲ್ಲಿ ಒಬ್ಬರಾದ ಶಿಬು ಸೊರೇನ್ (Shibu Soren) ಅವರು 81ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ.
ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ (Ganga Ram Hospital) ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಇತ್ತೀಚೆಗೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಉತ್ತರ ಪ್ರದೇಶದ 17 ಜಿಲ್ಲೆಗಳಲ್ಲಿ ಪ್ರವಾಹ – 12 ಮಂದಿ ಸಾವು, ಪ್ರಯಾಗ್‌ರಾಜ್ ಬಹುತೇಕ ಮುಳುಗಡೆ
ತಂದೆಯ ನಿಧನದ ಮಾಹಿತಿಯನ್ನು ಪುತ್ರನೂ ಆಗಿರುವ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ (Hemant Soren) ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ. ʻಪ್ರೀತಿಯ ದಿಶೋಮ್ ಗುರೂಜಿ ನಮ್ಮನ್ನ ಅಗಲಿದ್ದಾರೆ. ನಾನಿಂದು ಎಲ್ಲವನ್ನೂ ಕಳೆದುಕೊಂಡೆʼ ಅಂತ ಭಾವುಕ ಸಂದೇಶವೊಂದನ್ನೂ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಗ್ರೌಂಡ್ ಪೆನೆಟ್ರೇಟಿಂಗ್ ರೇಡಾರ್‌ನಿಂದ ಅಸ್ಥಿಪಂಜರ ಪತ್ತೆ ಕಾರ್ಯ ನಡೆಸಿ – ಎಸ್‌ಐಟಿಗೆ ದೂರುದಾರ ಹೊಸ ರಿಕ್ವೆಸ್ಟ್
ಜಾರ್ಖಂಡ್ ಮುಕ್ತಿ ಮೋರ್ಚಾದ ಮುಖಂಡರಾದ ಶಿಬು ಸೊರೇನ್ ಅವರು ಕಳೆದ 38 ವರ್ಷಗಳಿಂದ ಪಕ್ಷದ ಚುಕ್ಕಾಣಿ ಹಿಡಿದಿದ್ದರು. 4 ದಶಕಗಳ ಕಾಲ ರಾಜಕೀಯ ಜೀವನದಲ್ಲಿ ಶಿಬು ಸೊರೇನ್ ತಮ್ಮದೇ ಛಾಪು ಮೂಡಿಸಿದ್ದಾರೆ. 8 ಬಾರಿ ಲೋಕಸಭೆಗೆ, ಎರಡು ಅವಧಿಗೆ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದರು. ಇದನ್ನೂ ಓದಿ: ಕೆಲವರು ಅಧಿಕಾರ ಹಂಚಿಕೊಳ್ಳಲು ಒಪ್ಪಲ್ಲ – ಸಿದ್ದರಾಮಯ್ಯಗೆ ಟಾಂಗ್ ಕೊಟ್ರಾ ಡಿಕೆಶಿ?