ಶಿರೂರು ಗುಡ್ಡ ಕುಸಿತ ಪ್ರಕರಣ – ಐದು ವರ್ಷದ ಬಾಲಕಿ ಮೃತದೇಹ ಪತ್ತೆ

Public TV
1 Min Read

ಕಾರವಾರ: ಅಂಕೋಲ (Ankola) ಶಿರೂರು (Shirur) ಗುಡ್ಡ ಕುಸಿತ (Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕನ ಐದು ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ.

ಆವಂತಿಕ (5) ಮೃತ ಬಾಲಕಿ. ಗಂಗಾವಳಿ ನದಿಯಲ್ಲಿ ತೇಲಿ ಹೋಗಿ ಗೋಕರ್ಣ ಬ್ರಿಡ್ಜ್ ಬಳಿ ಆವಂತಿಕ ಮೃತದೇಹ ಪತ್ತೆಯಾಗಿದೆ. ಇನ್ನು ಈ ಕುರಿತು ಅಂಕೋಲ ತಹಶೀಲ್ದಾರ್ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಒಟ್ಟು ಆರು ಜನ ಮೃತಪಟ್ಟಿರುವ ಮಾಹಿತಿಯಿದೆ. ಸದ್ಯ ಈಗ ಐದು ಜನ ಸಿಕ್ಕಿದ್ದಾರೆ. ಕ್ಯಾಂಟೀನ್ ಮಾಲೀಕನ ಮಗಳು ಆವಂತಿಕಾ ಮೃತದೇಹ ಪತ್ತೆಯಾಗಿದೆ. ಮತ್ತೊಂದು ಕಡೆ ರಸ್ತೆ ಮೇಲಿನ ಗುಡ್ಡ ತೆರವು ಕಾರ್ಯ ಸಹ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗ, ಕರ್ನಾಟಕಕ್ಕೆ ಅಪಮಾನ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿದು 20ಕ್ಕೂ ಹೆಚ್ಚು ಜನರು ಮೃತ ಆಗಿರುವ ಬಗ್ಗೆ ಶಂಕೆ ವ್ಯಕ್ತ ಆಗುವುದರ ಜೊತೆಗೆ ಇನ್ನಷ್ಟು ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಈ ಹಿನ್ನೆಲೆ ಘಟನಾ ಸ್ಥಳಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. ಜಿಯೋಗ್ರಾಫಿಕಲ್ ಸರ್ವೇ ಆಫ್ ಇಂಡಿಯಾ ತಜ್ಞ ಸಂಜೀವ್ ಎಂಬವರು ಭೂಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈಗಾಗಲೇ ಗುಡ್ಡ ಕುಸಿತ ಆಗಿರುವ ಬಗ್ಗೆ ಬಹಳಷ್ಟು ಚರ್ಚೆ ಆಗುತ್ತಿದೆ. ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿದ್ದರಿಂದ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಭೂ ಕುಸಿತದ ಬಗ್ಗೆ ಅಧ್ಯಯನ ಮಾಡಲಿದೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟಕ್ಕೆ ಇಬ್ಬರು ಯೋಧರು ಹುತಾತ್ಮ

Share This Article