ಶಿವಮೊಗ್ಗ-ಬೆಂಗಳೂರು ವಿಮಾನದಲ್ಲಿ ತಾಂತ್ರಿಕ ದೋಷ; ವಿಮಾನ ಹಾರಾಟ ರದ್ದು

By
1 Min Read

ಶಿವಮೊಗ್ಗ: ಇಂಡಿಗೋ ವಿಮಾನದಲ್ಲಿ (IndiGo Flight) ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ-ಬೆಂಗಳೂರು (Shivamogga-Bengaluru) ನಡುವಿನ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ.

ಇಂದು (ಬುಧವಾರ)‌ ಬೆಳಗ್ಗೆ 9:50 ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರಟು ಶಿವಮೊಗ್ಗ ತಲುಪಿದ್ದ ವಿಮಾನ ವಾಪಸ್ 11:30 ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಬೇಕಿತ್ತು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ – ಜೆಟ್ ಏರ್‌ವೇಸ್‌ನ 538 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ವಿಮಾನ ಹಾರಾಟ ರದ್ದುಗೊಳಿಸಲಾಯಿತು. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಬೇಕಿದ್ದ ಸುಮಾರು 60 ಮಂದಿ ಪ್ರಯಾಣಿಕರು ವಿಮಾನ ಇಲ್ಲದ ಕಾರಣ ಪರದಾಡುವಂತಾಯಿತು.

ಈ ವೇಳೆ ತಾಂತ್ರಿಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ವಿಮಾನದಲ್ಲಿ ಉಂಟಾದ ದೋಷ ಸರಿಪಡಿಸುವಲ್ಲಿ ಮುಂದಾದರು. ಆದರೆ ಕೆಲವು ಪ್ರಯಾಣಿಕರು ವಾಪಸ್ ಹೋದರೆ, ಇನ್ನು ಕೆಲವು ಪ್ರಯಾಣಿಕರಿಗೆ ವಿಮಾನ ನಿಲ್ದಾಣ ಅಧಿಕಾರಿಗಳು ವಿಶೇಷ ಬಸ್ ವ್ಯವಸ್ಥೆ ಮಾಡಿ ಬೆಂಗಳೂರಿಗೆ ಕಳುಹಿಸುವ ವ್ಯವಸ್ಥೆ ಮಾಡಿದರು. ಇದನ್ನೂ ಓದಿ: ಬೆಂಗ್ಳೂರಲ್ಲಿ 3 ದಿನ ಆತಂಕ ಮೂಡಿಸಿ ಕೊನೆಗೂ ಸೆರೆ ಸಿಕ್ಕ ಚಿರತೆ ಸಾವು?

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್