ಮತಾಂಧ ಮುಸ್ಲಿಂ ಯುವಕರನ್ನು ಗಲ್ಲಿಗೇರಿಸಿ: ಟೆಂಗಳಿ

Public TV
1 Min Read

ಕಲಬುರಗಿ: ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹಷ೯ ಅವರ ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಮತಾಂಧ ಮುಸ್ಲಿಂ ಯುವಕರನ್ನು ತಕ್ಷಣವೇ ಗಲ್ಲಿಗೇರಿಸಬೇಕೆಂದು ಹಿಂದೂ ರಕ್ಷಕ ಶಿವಾಜಿ ಬ್ರಿಗೇಡ್‍ನ ಅಧ್ಯಕ್ಷ ಗುರುಶಾಂತ ಟೆಂಗಳಿ ಆಗ್ರಹಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮುಖಾಂತರ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ ಮಾತನಾಡಿದ ಅವರು, ರಾಜ್ಯದಲ್ಲಿ ಕೋಮು ಗಲಭೆಗಳನ್ನು ಸೃಷ್ಟಿಸುತ್ತಿರುವ ಎಸ್‍ಡಿಪಿಐ, ಪಿಎಫ್‍ಐ ಮತ್ತು ಇನ್ನೀತರ ದೇಶದ್ರೋಹಿ ಸಂಘಟನೆಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಹೇಳಿದರು.

ಸೀಗೆಹಟ್ಟಿಯಲ್ಲಿ 26 ವಷ9ದ ಯುವಕನಾದ ಹಾಗೂ ಭಜರಂಗದಳ ಕಾರ್ಯಕರ್ತನಾದ ಹರ್ಷ ಅವರನ್ನು ಬರ್ಬರವಾಗಿ ಕೊಲೆ ಮಾಡಿದ ಮುಸ್ಲಿಂ ಯುವಕರಲ್ಲಿ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಇವರನ್ನು ವಿಚಾರಣೆಗೈದು ಗಲ್ಲಿಗೇರಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಕೊಲೆ ಪ್ರಕರಣ – 7ನೇ ಆರೋಪಿ ಅರೆಸ್ಟ್‌

ಬಿಜೆಪಿ ಪಕ್ಷವು ವಿರೋಧ ಪಕ್ಷದ ಸ್ಥಾನದಲ್ಲಿದ್ದಾಗ ಸರ್ಕಾರ ಬಂದ ಕೆಲವೇ ದಿನಗಳಲ್ಲಿ ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವುದಾಗಿ ಭರವಸೆ ನೀಡಿತ್ತು. ಇದೀಗ ಬಿಜೆಪಿ ಆಡಳಿತ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದಿದ್ದು, ಕೊಟ್ಟ ಮಾತಿನಂತೆ ನಡೆಯಬೇಕೆಂದು ನೆನಪಿಸಿದರು.

ಹಿಂದೂ ಸಂಘಟನೆಯ ಕಾರ್ಯಕರ್ತ, ನಾಯಕರಿಗೆ ರಕ್ಷಣೆ ಒದಗಿಸಬೇಕು. ಹತ್ಯೆಗೊಳಗಾದ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು. ಒಂದು ವೇಳೆ ಬೇಡಿಕೆಗಳನ್ನು ಈಡೇರಿಸದೇ ಹೋದಲ್ಲಿ ಮುಂಬರುವ ದಿನಗಳಲ್ಲಿ ಹಿಂದೂ ಸಮಾಜ ಜಾಗೃತವಾಗಿ ರಾಜ್ಯ ಸರ್ಕಾರದ ವಿರುದ್ಧ ಧಂಗೆ ಎಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ನಟ ಚೇತನ್ ಕಾಣೆಯಾಗಿದ್ದಾರೆ ಎಂದು ಪತ್ನಿ ದೂರು

ಪ್ರತಿಭಟನೆಯಲ್ಲಿ ಶಿವರಾಜ್ ಬಾಳಿ, ಸುರೇಶ ತಳವಾರ, ಶಾಂತವೀರ ಸಾಲಿಮಠ, ಧನರಾಜ ಡೋಂಗರೆ,ಕಿರಣ ಖೇಳೆಗಾಂವಕರ, ರಾಘವೇಂದ್ರ ಗುಂಜೋಟಿ ಸೇರಿದಂತೆ ಹಲವು ಬ್ರಿಗೇಡ್‍ನ ಕಾರ್ಯಕರ್ತರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *