ಮನೆಯಲ್ಲಿ ಯಾರೂ ಇಲ್ಲದಾಗ ಯುವತಿ ನೇಣಿಗೆ ಶರಣು- ಕಾರಣ ನಿಗೂಢ

Public TV
1 Min Read

ಶಿವಮೊಗ್ಗ: ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತೀರ್ಥಹಳ್ಳಿಯ (Thirthahalli) ಬಿಳುಕೊಪ್ಪ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಅಧೀಕ್ಷಾ (20) ಎಂದು ಗುರುತಿಸಲಾಗಿದೆ. ಯುವತಿ ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡ್ತಿದ್ದಳು. ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಬೆಳಗ್ಗೆ ಯುವತಿ ಹೊರಗೆ ಬರದೇ ಇದ್ದಿದ್ದರಿಂದ ಅನುಮಾನಗೊಂಡು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ನೇಣಿಗೆ ಶರಣು

ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಐಸಿಸ್‌ ಜೊತೆ ನಂಟು; 2014 ರಲ್ಲಿ ಬಂಧಿತನಾಗಿದ್ದ ಟೆಕ್ಕಿ ದೋಷಿ ಎಂದು ಕೋರ್ಟ್‌ ತೀರ್ಪು

Share This Article