ಶಿವಮೊಗ್ಗ: ಮಹಾರಾಷ್ಟ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜಿಲ್ಲೆಯ ವಿವಿಧ ಗ್ರಾಮಗಳ ಯುವಕರು ಇಂದು ಬೆಳಗ್ಗೆ ಶಿವಮೊಗ್ಗಕ್ಕೆ ವಾಪಸ್ ಆಗಿದ್ದಾರೆ.
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ 21 ದಿನಗಳ ಕಾಲ ಭಾರತ ಲಾಕ್‍ಡೌನ್ ಆಗಿದೆ. ಕೆಲಸ ಇಲ್ಲದ ಕಾರಣ ಜಿಲ್ಲೆಯ 51 ಜನ ಯುವಕರ ತಂಡ ಶಿವಮೊಗ್ಗಕ್ಕೆ ಮರಳಿದೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಜಿಲ್ಲಾಡಳಿತ ಎಲ್ಲಾ ಯುವಕರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿತು.
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕಾರಣ ಈ ಯುವಕರ ತಂಡ ಗ್ರಾಮೀಣ ಭಾಗಗಳಿಗೆ ತೆರಳುವ ಮುನ್ನ ತಪಾಸಣೆ ನಡೆಸಿದ್ದಾರೆ. ಅಲ್ಲದೇ ಅಗತ್ಯವಿದ್ದರೆ ಆಸ್ಪತ್ರೆಯಲ್ಲಿ ಕ್ವಾರಂಟೈನ್‍ಗೆ ಒಳಪಡಿಸಲಾಗುವುದು ಎಂದು ಸಹ ವೈದ್ಯರು ತಿಳಿಸಿದ್ದಾರೆ.