ಸಹೋದರ ಅಪ್ಪುಗೆ ವಿಶೇಷವಾಗಿ ಶುಭಕೋರಿದ ಶಿವಣ್ಣ

Public TV
1 Min Read

ಸ್ಯಾಂಡಲ್‌ವುಡ್ ಪವರ್ ಸ್ಟಾರ್ ಪುನೀತ್‌ ರಾಜ್‌ಕುಮಾರ್ (Puneeth Rajkumar) ಅವರ 49ನೇ ವರ್ಷದ ಹುಟ್ಟುಹಬ್ಬವನ್ನು ಸ್ಮರಣೀಯವಾಗಿ ಅಭಿಮಾನಿಗಳು ಆಚರಿಸುತ್ತಿದ್ದಾರೆ. ಇದರ ನಡುವೆ ಪ್ರೀತಿಯ ತಮ್ಮ ಅಪ್ಪುಗೆ ವಿಶೇಷವಾಗಿ ಶಿವರಾಜ್‌ಕುಮಾರ್ (Shivarajkumar) ಶುಭಹಾರೈಸಿದ್ದಾರೆ. ನನ್ನ ಮನಸಲ್ಲೇ ಸದಾ ರಾಜನಂತೆ ಬಾಳುವ ತಮ್ಮ ಎಂದು ಶಿವಣ್ಣ ಸ್ಮರಿಸಿದ್ದಾರೆ. ಇದನ್ನೂ ಓದಿ:ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿದ ಧ್ರುವ ಸರ್ಜಾ

ಅಪ್ಪು ಆಗಿ ಬಂದು ನೀನು ಪುನೀತ್‌ನಾಗಿ ಎಲ್ಲರ ಮನಸ್ಸಲ್ಲೂ ಭದ್ರವಾಗಿ ಇದ್ದು ಬಿಟ್ಟೆ. ಜನ ನಿನ್ನಲ್ಲಿ ದೇವರನ್ನು ಕಾಣುತ್ತಾರೆ. ಎಷ್ಟೋ ಜನಕ್ಕೆ ನೀನು ಮಾರ್ಗದರ್ಶಿ, ಅವರ ಆರಾಧ್ಯ ದೈವ, ಕೋಟಿ ಕೋಟಿ ಅಭಿಮಾನಿಗಳಿಗೆ ನೀನು ಪವರ್ ಸ್ಟಾರ್ ಎಂದು ಶಿವಣ್ಣ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by DrShivaRajkumar (@nimmashivarajkumar)

ಆದರೆ ನನಗೆ ಎಂದೆಂದಿಗೂ ನನ್ನ ಪುಟ್ಟ ತಮ್ಮ. ನನ್ನ ಕೈ ಹಿಡಿದು ನಡೆದ ತಮ್ಮ, ನಿನ್ನ ನಗುವಲ್ಲಿ ನನಗೆ ಸಂತೋಷ ಹುಡುಕಿ ಕೊಟ್ಟ ತಮ್ಮ, ನನ್ನ ಎದೆಯ ಮೇಲೆ ಮಲಗಿದ ತಮ್ಮ, ನನ್ನ ಮನಸಲ್ಲೇ ಸದಾ ರಾಜನಂತೆ ಬಾಳುವ ತಮ್ಮ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪು ಎಂದು ಶಿವಣ್ಣ ಪ್ರೀತಿಯಿಂದ ವಿಶ್ ಮಾಡಿದ್ದಾರೆ. ಪುನೀತ್‌ರನ್ನು ನಟ ಸ್ಮರಿಸಿದ್ದಾರೆ.

ಪುನೀತ್ ರಾಜ್‌ಕುಮಾರ್ ಇಲ್ಲದೇ 3ನೇ ವರ್ಷದ ಹುಟ್ಟುಹಬ್ಬ ಇದಾಗಿದೆ. ಅಪ್ಪು ಸ್ಮಾರಕದ ಬಳಿ ಜನಸಾಗರನೇ ಹರಿದು ಬರುತ್ತಿದೆ.

Share This Article