ನಾಳೆ ಚಿತ್ರೋದ್ಯಮ ಬಂದ್: ನಟ ಶಿವರಾಜ್ ಕುಮಾರ್ ಮುಂದಾಳತ್ವದಲ್ಲಿ ಹೋರಾಟ

Public TV
1 Min Read

ನ್ನಡಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಈ ಹೋರಾಟಕ್ಕೆ ಕನ್ನಡ ಚಿತ್ರರಂಗ ಕೂಡ ಬೆಂಬಲ ಸೂಚಿಸಿತ್ತು. ಚಿತ್ರೋದ್ಯಮ ಬಂದ್ (Film Industry) ಮಾಡುವ ಮೂಲಕ ಹೋರಾಟಕ್ಕೆ ಇಳಿಯುವುದಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿನ್ನೆ ಹೇಳಿಕೆ ನೀಡಿತ್ತು. ಆದರೆ, ಈ ಹೋರಾಟದ ನೇತೃತ್ವವನ್ನು ವಹಿಸುವವರು ಯಾರು ಎನ್ನುವ ಪ್ರಶ್ನೆ ಕೂಡ ಮೂಡಿತ್ತು.

ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಶಿವರಾಜ್ ಕುಮಾರ್ (Shivaraj Kumar) ನಿವಾಸಕ್ಕೆ ಆಗಮಿಸಿ, ನಾಳೆಯ ಹೋರಾಟಕ್ಕೆ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಹೀಗಾಗಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ನಾಳೆ ಗುರುರಾಜ್‌ ಕಲ್ಯಾಣ ಮಂಟಪದ ಬಳಿ ಚಿತ್ರೋದ್ಯಮ ಹೋರಾಟಕ್ಕೆ ಇಳಿಯಲಿದೆ.

ಸಾಕಷ್ಟು ವರ್ಷಗಳಿಂದ ಕಾವೇರಿ ನೀರಿಗಾಗಿ ಹೋರಾಟ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸೆ.29ರಂದು ಕರ್ನಾಟಕ ಬಂದ್ ಕರೆ ನೀಡಿದ್ದು, ಸೀರಿಯಲ್, ಸಿನಿಮಾ ಚಿತ್ರೀಕರಣ, ಚಿತ್ರ ಪ್ರದರ್ಶನ ಸೇರಿದಂತೆ ಎಲ್ಲಾ ಚಟುವಟಿಕೆಗಳು ಬಂದ್ ಮೂಲಕ ಚಿತ್ರೋದ್ಯಮ ಸಾಥ್ ನೀಡುತ್ತಿದೆ. ಇದನ್ನೂ ಓದಿ:ನಿಮ್ಮನ್ನು ಪತಿಯಾಗಿ ಪಡೆಯಲು ಪುಣ್ಯ ಮಾಡಿದ್ದೇನೆ- ತೇಜಸ್ವಿನಿ ಪ್ರಕಾಶ್

ನಾಳೆಯ ಪ್ರತಿಭಟನೆಯಲ್ಲಿ ಶಿವಣ್ಣ, ಉಪೇಂದ್ರ, ರಾಘಣ್ಣ, ನೆನಪಿರಲಿ ಪ್ರೇಮ್, ಅಜಯ್ ರಾವ್, ಪ್ರಜ್ವಲ್ ದೇವರಾಜ್, ರಂಗಾಯಣ ರಘು, ಸಾಧು ಕೋಕಿಲಾ ಸೇರಿದಂತೆ ಕಿರುತೆರೆ ನಟ- ನಟಿಯರು ಭಾಗಿಯಾಗುವ ಸಾಧ್ಯತೆ ಇದೆ.

ಫಿಲ್ಮ್ ಚೇಂಬರ್ ಅಂಗ ಸಂಸ್ಥೆಗಳಾದ, ನಿರ್ಮಾಪಕರ ಸಂಘ, ಕಲಾವಿದರ ಸಂಘ, ನಿರ್ದೇಶಕರ ಸಂಘದಿಂದ, ಒಕ್ಕೂಟದಿಂದಲೂ ಕರ್ನಾಟಕ ಬೆಂಬಲಿಸಲಿದ್ದಾರೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್