ಮಾಲಿಕನಾದ ಶಿವಣ್ಣ- ‘ಉತ್ತರಕಾಂಡ’ ಚಿತ್ರದ ಫಸ್ಟ್‌ ಲುಕ್‌ ಔಟ್‌

Public TV
1 Min Read

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಚಿತ್ರ ‘ಉತ್ತರಕಾಂಡ’ (Uttarakaanda) ಇದೀಗ ಬಹು ಬೇಡಿಕೆಯಲ್ಲಿದ್ದ ಲುಕ್ ಒಂದನ್ನು ಬಿಡುಗಡೆ ಮಾಡಿದೆ. ಕರುನಾಡ ಡಾ.ಚಕ್ರವರ್ತಿ ಶಿವರಾಜ್‌ಕುಮಾರ್ (Shivarajkumar) ಅವರ ಜು.12ರಂದು ಹುಟ್ಟುಹಬ್ಬದ ಅಂಗವಾಗಿ ಒಂದು ದಿನ ಮುಂಚಿತವಾಗಿ ಫಸ್ಟ್ ಲುಕ್ ಬಿಡುಗಡೆ ಮಾಡಿದೆ ಚಿತ್ರತಂಡ. ಮಾಲೀಕನ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ಶಿವಣ್ಣ, ತಮ್ಮ ಲುಕ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಪ್ರತಿ ಒಂದು ಪಾತ್ರದಲ್ಲೂ, ವಿಶಿಷ್ಟವಾಗಿ ಕಾಣುವ ಶಿವರಾಜ್‌ಕುಮಾರ್ ಇದೀಗ ‘ಉತ್ತರಕಾಂಡ’ದಲ್ಲೂ ತಮ್ಮ ಲುಕ್ ಮೂಲಕ ಎಲ್ಲರ ಮನೆ ಮಾತಾಗಿದ್ದಾರೆ.‌ ಇದನ್ನೂ ಓದಿ:‘ಕೆಂಡ’ ಟ್ರೈಲರ್‌ನಲ್ಲಿ ಕಂಡು ಕೇಳರಿಯದ ಕಥೆಯ ಸುಳಿವು!

 

View this post on Instagram

 

A post shared by DrShivaRajkumar (@nimmashivarajkumar)


ಬಹುನಿರೀಕ್ಷಿತ ಚಿತ್ರ ‘ಉತ್ತರಕಾಂಡ’ ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಇದು ರೋಹಿತ್ ಪದಕಿಯ ಕೃತಿಯಾಗಿದೆ. ಚಿತ್ರಕ್ಕೆ ಖ್ಯಾತ ಗಾಯಕ, ಸಂಯೋಜಕ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಿದ್ದು, ಅಧೈತ್ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ಚಿತ್ರಕ್ಕೆ ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿರುತ್ತಾರೆ. ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಕೆಆರ್‌ಜಿ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.

ಬಹುಪ್ರಮುಖ ತಾರಾಬಳಗವನ್ನು ಹೊಂದಿರುವ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ ಧನಂಜಯ, ಭಾವನಾ ಮೆನನ್ (Bhavana Menon), ಐಶ್ವರ್ಯ ರಾಜೇಶ್, ದಿಗಂತ್ ಮುಂತಾದವರು ಬಣ್ಣ ಹಚ್ಚಿದ್ದಾರೆ.

Share This Article