ಚಾಮುಂಡಿ ಬೆಟ್ಟ ಏರಿ ದೇವಿ ದರ್ಶನ ಪಡೆದ ಶೋಭಾ ಕರಂದ್ಲಾಜೆ

Public TV
1 Min Read

ಮೈಸೂರು: ಇಂದು ನಾಲ್ಕನೇ ಆಷಾಢ ಶುಕ್ರವಾರ ಹಿನ್ನೆಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಚಾಮುಂಡಿ ಬೆಟ್ಟದ (Chamund ಮೆಟ್ಟಿಲುಗಳನ್ನು ಹತ್ತಿ ದೇವಿ ದರ್ಶನ ಪಡೆದರು.

ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ಟಿಲುಗಳ ಮೂಲಕ ಬೆಟ್ಟವನ್ನೇರಿ ನಾಡಿನ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ಆರ್ಶೀವಾದ ಪಡೆದರು.ಇದನ್ನೂ ಓದಿ: ಜೋಕಾಲಿ ಆಡುವ ವೇಳೆ ಚೂಡಿದಾರ್ ವೇಲ್ ಸಿಲುಕಿ 12ರ ಬಾಲಕಿ ಸಾವು

ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರದ ಹಿನ್ನೆಲೆ ನಾಡದೇವಿ ಚಾಮುಂಡಿಗೆ ಸಿಂಹವಾಹಿನಿ ಅಲಂಕಾರ ಮಾಡಲಾಗಿದೆ. ಉತ್ಸವ ಮೂರ್ತಿಗೆ ವಿವಿಧ ಬಗೆಯ ಹೂ ಹಾಗೂ ನವಿಲಿನಗರಿ ಹಾರದ ಅಲಂಕಾರ ಮಾಡಲಾಗಿದೆ. ದೇವಾಲಯದ ಆವರಣಕ್ಕೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿದೆ. ಮುಂಜಾನೆ 4:30ರಿಂದ ತಾಯಿಗೆ ವಿಶೇಷ ಪೂಜೆ ನೆರವೇರುತ್ತಿದೆ.

ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ಭಕ್ತರು ತಾಯಿಯ ದರ್ಶನ ಪಡೆಯುತ್ತಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿಷೇಧಿಸಲಾಗಿದೆ.ಇದನ್ನೂ ಓದಿ: ಮಸ್ಕಿಯಲ್ಲಿ 4000 ವರ್ಷಗಳ ಹಿಂದೆಯೂ ಇತ್ತು ಜನವಸತಿ – ಸಂಶೋಧನೆಯಿಂದ ಬಯಲು

Share This Article