ಮುಂಬೈ: 10ನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಶಾಲಾ ಆವರಣದಲ್ಲಿಯೇ 21 ವರ್ಷದ ಇಬ್ಬರು ಯುವಕರು ಚಾಕುವಿನಿಂದ ಇರಿದಿರುವ ಶಾಕಿಂಗ್ ಸುದ್ದಿ ಪುಣೆಯಲ್ಲಿ ಬೆಳಕಿಗೆ ಬಂದಿದೆ.
ಪುಣೆಯ ವಡ್ಗಾಂವ್ ಶೇರಿ ಪ್ರದೇಶದ ಶಾಲಾ ಆವರಣದಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಸೋಮವಾರ(ಇಂದು) 21 ವರ್ಷದ ಇಬ್ಬರು ಯುವಕರು ಚಾಕುವಿನಿಂದ ಇರಿದು ಕೊಂದಿದ್ದಾರೆ. ಬಾಲಕಿ ನೆಲದ ಮೇಲೆ ಬಿದ್ದು ಒದ್ದಾಡುತ್ತಿರುವಾಗ ಆರೋಪಿಗಳು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ ಎಂದು ಪೊಲೀಸರಿಗೆ ಸ್ಥಳೀಯರು ತಿಳಿಸಿದ್ದಾರೆ. ಇದನ್ನೂ ಓದಿ: RSS ಪಥಸಂಚಲನ – ರಸ್ತೆಯುದ್ದಕ್ಕೂ ರಂಗೋಲಿ ಬಿಡಿಸಿ ಹೂಹಾರ ಹಾಕಿ ಸ್ವಾಗತ
ಬಾಲಕಿಗೆ ಚಾಕುವಿನಿಂದ ಇರಿದ ಬಳಿಕ ಆರೋಪಿಗಳು ವಿಷ ಸೇವಿಸಿದ್ದು, ಇಬ್ಬರನ್ನೂ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಉದ್ದೇಶ ಏನು ಎಂಬುದು ಮಾತ್ರ ಇನ್ನು ತಿಳಿದುಬಂದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ರೋಹಿದಾಸ್ ಪವಾರ್ ಮಾಧ್ಯಮಗಳಿಗೆ ಹೇಳಿದ್ದಾರೆ.
ಘಟನೆ ವೇಳೆ ಸ್ಥಳದಲ್ಲಿದ್ದ ಶಿಕ್ಷಕರು ಮತ್ತು ಇತರರು ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲೇ ಇವರಿಗೆ ಚಿಕಿತ್ಸೆಯನ್ನು ಕೊಡಿಸಲಾಗಿದೆ. ಆರೋಪಿಗಳನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ಹಿಜಬ್ ತೀರ್ಪು: ಮಂಗಳವಾರ ಉಡುಪಿ, ಶಿವಮೊಗ್ಗ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

 
			

 
		 
		 
                                
                              
		