ಕೊಲಂಬಿಯಾದ ಬಲಪಂಥೀಯ ಅಧ್ಯಕ್ಷೀಯ ಅಭ್ಯರ್ಥಿ ಮೇಲೆ ಗುಂಡೇಟು

Public TV
1 Min Read

ಬೊಗೋಟಾ: ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಮಿಗುಯೆಲ್ ಉರಿಬೆ (Colombian Senator Miguel Uribe) ಮೇಲೆ ಶನಿವಾರ ಗುಂಡಿನ (Shot) ದಾಳಿ ನಡೆದಿದೆ.

ಬೊಗೋಟಾದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಮಿಗುಯೆಲ್ ಉರಿಬೆ ಮೇಲೆ ಗುಂಡು ಹಾರಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಉರಿಬೆ ಅವರನ್ನು ಆಸ್ಪತ್ರೆಗೆ (Hospital) ದಾಖಲಿಸಲಾಗಿದ್ದು ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ದಕ್ಷಿಣ ಅಮೆರಿಕ ಖಂಡದಲ್ಲಿರುವ ಕೊಲಂಬಿಯಾದಲ್ಲಿ 2026ರಲ್ಲಿ ಚುನಾವಣೆ (Election) ನಡೆಯಲಿದೆ. ಮಿಗುಯೆಲ್ ಉರಿಬೆ ಸೆನೆಟರ್‌ ಆಗಿದ್ದು ಬಲಪಂಥೀಯ ರಾಜಕಾರಣಿಯಾಗಿದ್ದಾರೆ. ಇದನ್ನೂ ಓದಿ: ರಷ್ಯಾದ ಏರ್‌ಬೇಸ್‌ ಉಡೀಸ್‌ ಮಾಡೋಕೆ ಉಕ್ರೇನ್ ಬಳಸಿದ FPV ಡ್ರೋನ್‌ ವಿಶೇಷವೇನು ಗೊತ್ತಾ?

ಈ ದಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಓರ್ವ ಶಂಕಿತನನ್ನು ಬಂಧಿಸಲಾಗಿದ್ದು, ಇತರರು ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಕೊಲಂಬಿಯಾದ ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ಹೇಳಿದ್ದಾರೆ.

ಉರಿಬೆ ಕೊಲಂಬಿಯಾದ ಪ್ರಮುಖ ಕುಟುಂಬದಿಂದ ಬಂದವರಾಗಿದ್ದು, ದೇಶದ ಲಿಬರಲ್ ಪಕ್ಷದೊಂದಿಗೆ ಸಂಪರ್ಕ ಹೊಂದಿದ್ದಾರೆ. ಅವರ ತಂದೆ ಉದ್ಯಮಿ ಮತ್ತು ಯೂನಿಯನ್ ನಾಯಕಿಯಾಗಿದ್ದರು. ಅವರ ತಾಯಿ, ಪತ್ರಕರ್ತೆ ಡಯಾನಾ ಟರ್ಬೇ ಅವರನ್ನು 1990 ರಲ್ಲಿ ಸಶಸ್ತ್ರ ಗುಂಪು ಅಪಹರಣ ಮಾಡಿತ್ತು. ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಅವರನ್ನು ಹತ್ಯೆ ಮಾಡಲಾಗಿತ್ತು. ಇದನ್ನೂ ಓದಿ: 5 ನಿಮಿಷ ತಬ್ಬಿಕೊಳ್ಳಲು 600 ರೂ. ಕೊಡ್ತಾರಂತೆ ಚೀನಾ ಮಹಿಳೆಯರು!

ಕೊಲಂಬಿಯಾ ದಶಕಗಳಿಂದ ಎಡಪಂಥೀಯ ಬಂಡುಕೋರರು ಮತ್ತು ಸರ್ಕಾರದ ನಡುವಿನ ಸಂಘರ್ಷದಲ್ಲಿ ಸಿಲುಕಿಕೊಂಡಿದೆ.

Share This Article