ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

1 Min Read

– ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

- Advertisement -

ನವದೆಹಲಿ: ಎಲ್‌ಪಿಜಿ ಸಿಲಿಂಡರ್‌ಗಳ (LPG Cylinder) ಕೃತಕ ಅಭಾವ ಮತ್ತು ಕಾಳಸಂತೆ ತಡೆಯಲು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸಿಲಿಂಡರ್ ಬುಕ್ಕಿಂಗ್ (Cylinder Booking) ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ.

- Advertisement -

ಗೃಹಬಳಕೆ ಗ್ರಾಹಕರಿಗೆ ಮೊದಲ ಆದ್ಯತೆ ನೀಡಲಾಗುವುದು. ದೇಶೀಯ ಉತ್ಪಾದನೆ ಹೆಚ್ಚಿಸಲು ಮತ್ತು ಹೊಸ ದೇಶಗಳಿಂದ ಎಲ್‌ಪಿಜಿ ಆಮದು ಮಾಡಿಕೊಳ್ಳಲು ಸರ್ಕಾರ ಕ್ರಮ ಕೈಗೊಂಡಿದೆ. ಈ ಹಿಂದೆ 55 ದಿನಗಳಿಗೊಮ್ಮೆ ಸಿಲಿಂಡರ್ ಬುಕ್ ಮಾಡುತ್ತಿದ್ದವರು, ಈಗ ಯುದ್ಧದ ಭೀತಿಯಿಂದ ಕೇವಲ 15 ದಿನಗಳಲ್ಲೇ ಬುಕ್ಕಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಇದನ್ನು ನಿಯಂತ್ರಿಸಲು ಹೊಸ ನಿಯಮ ಜಾರಿಗೆ ತರಲಾಗಿದೆ. ಇದನ್ನೂ ಓದಿ: ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

- Advertisement -

ವಾಣಿಜ್ಯ ಬಳಕೆಯ ಸಿಲಿಂಡರ್‌ಗಳಿಗಿಂತ ಮನೆ ಬಳಕೆಯ ಗ್ರಾಹಕರಿಗೆ ಮೊದಲ ಆದ್ಯತೆ ನೀಡುವಂತೆ ಸರ್ಕಾರ ಸೂಚನೆ ನೀಡಿದೆ. ಮನೆ ಬಳಕೆಯ ಗ್ರಾಹಕರ ಹಿತವೇ ನಮಗೆ ಮುಖ್ಯ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

- Advertisement -

Share This Article