ನವಿಲುಗರಿ ಧರಿಸಿದ್ದ ಮಾತ್ರಕ್ಕೆ ಪ್ರಧಾನಿಯವರನ್ನು ಹಿಡಿದುಕೊಂಡು ಹೋಗಬೇಕಾ: ಹರಿಪ್ರಸಾದ್ ಪ್ರಶ್ನೆ

Public TV
2 Min Read

ಚಿತ್ರದುರ್ಗ: ಈ ಹಿಂದೆ ಪ್ರಧಾನಮಂತ್ರಿಯವರು ನವಿಲು ಗರಿ (Peacock feather)  ಧರಿಸಿದ್ದರು, ನವಿಲು ಸಾಕಿದ್ದರು. ಹಾಗೆಂದ ಮಾತ್ರಕ್ಕೆ ಪೊಲೀಸರು (Police) ಅವರನ್ನು ಹಿಡಿದುಕೊಂಡು ಹೋಗಬೇಕಾ? ಫ್ಯಾಷನ್‌ಗಾಗಿ ಹುಲಿ ಉಗುರು ಇತರೆ ವಸ್ತು ಬಳಸುವುದು ಸರಿಯಲ್ಲ, ವನ್ಯಜೀವಿ ಸಂರಕ್ಷಣೆ ಕಾಯ್ದೆ ಉಲ್ಲಂಘಿಸಿದವರು ಯಾರೇ ಆಗಿರಲಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (BK Hariprasad) ಆಗ್ರಹಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಲಿ ಉಗುರು, ಕರಡಿ ಕೂದಲು ಸೇರಿದಂತೆ ಆನೆ ಕೂದಲು, ದಂತ ಹಾಗೂ ಇತರೆ ವಸ್ತುಗಳನ್ನು ಧರಿಸಿ ಕಾಡುಪ್ರಾಣಿಗಳನ್ನು ಅಣಕಿಸುವ ಕಾರ್ಯಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಕಬ್ಬು ಬೆಳೆಯುವ ಉತ್ಸಾಹ – 20 ವರ್ಷಗಳಿಂದ ಮುಚ್ಚಿದ ಸಕ್ಕರೆ ಫ್ಯಾಕ್ಟರಿಯನ್ನು ತೆರೆಯಲು ಸರ್ಕಾರದ ಬೆನ್ನತ್ತಿದ ರೈತರು

ಇದೇ ವೇಳೆ ದರ್ಗಾದಲ್ಲಿ, ಮೌಲ್ವಿಗಳಿಂದ ನವಿಲು ಗರಿ ಬಳಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರಧಾನ ಮಂತ್ರಿಗಳೂ (Prime Minister) ನವಿಲು ಸಾಕಿದ್ದರು, ನವಿಲು ಗರಿ ಧರಿಸಿದ್ದರು. ಹಾಗಂತ ಪ್ರಧಾನಿಯವರನ್ನ ಪೊಲೀಸರು ಹಿಡಿದುಕೊಂಡು ಹೋಗಬೇಕಾ? ದರ್ಗಾಗಳಲ್ಲಿ ಮೌಲ್ವಿಗಳು ಬಳಸುವ ನವಿಲುಗರಿ ಕೂಡ ನೈಸರ್ಗಿಕವಾಗಿ ಉದುರುತ್ತದೆ. ಒಂದು ವೇಳೆ ನವಿಲನ್ನು ಕೊಂದು ಗರಿ ತಂದಿದ್ದರೆ ಅಂಥವರ ವಿರುದ್ಧವೂ ಕ್ರಮವಾಗಬೇಕು ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ಎರಡೂವರೆ ವರ್ಷಗಳ ಬಳಿಕ ಸಿಎಂ ಬದಲಾವಣೆ ವಿಚಾರ ಯಾರಿಗೂಗೊತ್ತಿಲ್ಲ. ಅದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮುಖಂಡರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ರಾಜ್ಯ ಉಸ್ತುವಾರಿ ಸುರ್ಜೆವಾಲಾ ಸೇರಿದಂತೆ ವೇಣುಗೋಪಾಲ್ ಮತ್ತು ಸಿಎಂ, ಡಿಸಿಎಂಗೆ ಮಾತ್ರ ಗೊತ್ತಿದೆ. ಆ ಬಗ್ಗೆ ಬೇರೆ ಯಾರೂ ಹೇಳೋಕಾಗಲ್ಲ. ಅವರವರ ವೈಯಕ್ತಿಕ ಅಭಿಪ್ರಾಯ ಹೇಳಬಹುದು ಅಷ್ಟೇ ಎಂದು ಜಾರಿಕೊಂಡಿದ್ದಾರೆ. ಇದನ್ನೂ ಓದಿ: ಕಾರ್ಯಕರ್ತರಲ್ಲಿ ಸಾಮರಸ್ಯ ಮೂಡದಿದ್ರೆ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಸಂಘರ್ಷವಾಗಲಿದೆ: ರೇಣುಕಾಚಾರ್ಯ

ಶಾಸಕರ ಟೀಂ ಜೊತೆ ಸಚಿವ ಸತೀಶ್ ಜಾರಕಿಹೊಳಿ ದುಬೈ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ದುಬೈ ರೀತಿ ರಾಜ್ಯದ ಅಭಿವೃದ್ಧಿಗಾಗಿ ಶಾಸಕರನ್ನು ಸತೀಶ್ ಕರೆದೊಯ್ದರೆ ಆಶ್ಚರ್ಯವಿಲ್ಲ. ಅದನ್ನು ತಪ್ಪಾಗಿ ಅರ್ಥೈಸಿಕೊಳ್ಳಬಾರದು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್; ಆರೋಪಿ ಸುಳಿವು ಕೊಟ್ಟವರಿಗೆ 2 ಲಕ್ಷ ರೂ. ಬಹುಮಾನ ಘೋಷಿಸಿದ NIA

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್