ಗೆಹ್ಲೋಟ್‌ ಹೊಗಳಿದ ಮೋದಿ – ಲಘುವಾಗಿ ಪರಿಗಣಿಸಬಾರದು ಎಂದು ಎಚ್ಚರಿಸಿದ ಪೈಲಟ್‌

Public TV
2 Min Read

ಜೈಪುರ: ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ (Ashok Gehlot) ಅವರನ್ನು ಹೊಗಳಿರುವುದಕ್ಕೆ ಕಾಂಗ್ರೆಸ್‌ (Congress) ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ (Sachin Pilot) ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಯನ್ನು ಲಘುವಾಗಿ ಪರಿಗಣಿಸಬಾರದು ಎಂದು ಪಕ್ಷದ ಹಿರಿಯ ನಾಯಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಪ್ರಧಾನಿ ಅವರು ಸಂಸತ್ತಿನಲ್ಲಿ ಗುಲಾಂ ನಬಿ ಆಜಾದ್ (Ghulam Nabi Azad) ಅವರನ್ನು ಇದೇ ರೀತಿ ಹೊಗಳಿದ್ದರು. ಅದರ ನಂತರ ಏನಾಯಿತು ಎಂದು ನಾವು ನೋಡಿದ್ದೇವೆ ಎಂದು ಪೈಲಟ್ ಮಾರ್ಮಿಕವಾಗಿ ನುಡಿದಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಾಜಿ ಸಂಸದ ಚೌಹಾಣ್‌ ಕಾಂಗ್ರೆಸ್‌ ಸೇರ್ಪಡೆ

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿನ್ ಪೈಲಟ್, ಪ್ರಧಾನಿ ನರೇಂದ್ರ ಮೋದಿ ಅವರು ಮಂಗರ್ ಧಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಾವೆಲ್ಲರೂ ಕಣ್ಣಾರೆ ಕಂಡಿದ್ದೇವೆ. ಈ ಹಿಂದೆ ರಾಜ್ಯಸಭೆಯಲ್ಲಿಯೂ ಮಾಜಿ ಸಂಸದ ಗುಲಾಂ ನಬಿ ಅವರನ್ನು ಪ್ರಧಾನಿ ಹೊಗಳಿದ್ದರು. ಆಜಾದ್ ಅವರು ಪಕ್ಷ ತೊರೆದ ದಿನ, ನಂತರ ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ನಿನ್ನೆ ನಡೆದದ್ದು ಕೂಡ ಆಸಕ್ತಿದಾಯಕ ಬೆಳವಣಿಗೆಯಾಗಿದ್ದು, ಅದನ್ನು ಲಘುವಾಗಿ ಪರಿಗಣಿಸಬಾರದು ಎಂದು ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ರಾಜಸ್ಥಾನದ ಮಂಗರ್ ಧಾಮಕ್ಕೆ ಭೇಟಿ ನೀಡಿದರು. ಇದೇ ವೇಳೆ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಇದನ್ನೂ ಓದಿ: ರಷ್ಯಾ ಈಗ ಭಾರತದ ಅತಿ ದೊಡ್ಡ ತೈಲ ಪೂರೈಕೆದಾರ ದೇಶ

ಸಮಾರಂಭದಲ್ಲಿ ಗೆಹ್ಲೋಟ್ ತಮ್ಮ ಭಾಷಣದಲ್ಲಿ, ಪ್ರಧಾನಿ ಮೋದಿ ವಿದೇಶಕ್ಕೆ ಹೋದಾಗ, ಪ್ರಜಾಪ್ರಭುತ್ವ ಆಳವಾಗಿ ಬೇರೂರಿರುವ ಗಾಂಧಿ ರಾಷ್ಟ್ರದ ಪ್ರಧಾನಿಯಾಗಿರುವುದರಿಂದ ಅವರಿಗೆ ಹೆಚ್ಚಿನ ಗೌರವ ಸಿಗುತ್ತದೆ. ಜಗತ್ತು ಇದನ್ನು ಅರಿತುಕೊಂಡಾಗ ಆ ದೇಶದ ಪ್ರಧಾನಿ ಎಂದು ಅವರು ಹೆಮ್ಮೆಪಡುತ್ತಾರೆ ಎಂದು ಬಣ್ಣಿಸಿದ್ದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಗುಜರಾತ್ ಮುಖ್ಯಮಂತ್ರಿಯಾಗಿದ್ದ ದಿನಗಳನ್ನು ನೆನಪಿಸಿಕೊಂಡರು. ಅಶೋಕ್ ಗೆಹ್ಲೋಟ್ ಜಿ ಮತ್ತು ನಾನು ಒಟ್ಟಿಗೆ ಸಿಎಂ ಆಗಿ ಕೆಲಸ ಮಾಡಿದ್ದೇವೆ. ಅವರು ನಮ್ಮ ಸಿಎಂಗಳಲ್ಲಿ ಅತ್ಯಂತ ಹಿರಿಯರಾಗಿದ್ದರು. ಈಗಲೂ ಸಹ ಅವರು ಅತ್ಯಂತ ಹಿರಿಯ ಸಿಎಂಗಳಲ್ಲಿ ಒಬ್ಬರು ಹಾಡಿಹೊಗಳಿದ್ದರು. ಇದನ್ನೂ ಓದಿ: 4 ದಿನದ ಛತ್ ಪೂಜೆಯಲ್ಲಿ 53 ಜನ ಸಾವು- ಆರ್ಥಿಕ ನೆರವು ಘೋಷಿಸಿದ ನಿತೀಶ್ ಕುಮಾರ್

ಈ ಬೆಳವಣಿಗೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿನ್‌ ಪೈಲಟ್‌, ಶಿಸ್ತಿನ ವಿರುದ್ಧ ನಡೆದುಕೊಳ್ಳುವವರ ಮೇಲೆ ಕ್ರಮ ತೆಗೆದುಕೊಳ್ಳುವ ಸಮಯ ಬಂದಿದೆ. ರಾಜಸ್ಥಾನದ ತಪ್ಪಿತಸ್ಥ ಶಾಸಕರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ರಾಜಸ್ಥಾನಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 25 ರಂದು ಕರೆಯಲಾದ ಸಿಎಲ್‌ಪಿ ಸಭೆಯನ್ನು ನಡೆಸಲಾಗಲಿಲ್ಲ. ಎಐಸಿಸಿ ಇದನ್ನು ಅಶಿಸ್ತಿನ ವಿಷಯವೆಂದು ಪರಿಗಣಿಸಿದೆ. ನಿಯಮಗಳು ಎಲ್ಲರಿಗೂ ಒಂದೇ. ಆದ್ದರಿಂದ ಅಶಿಸ್ತು ತೋರಿದರೆ ಕ್ರಮ ತೆಗೆದುಕೊಳ್ಳಬೇಕು. ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನಾನು ನಂಬುತ್ತೇನೆ. ನೋಟಿಸ್ ಜಾರಿ ಮಾಡಿರುವ ಶಾಸಕರಿಗೆ ಉತ್ತರ ನೀಡುವಂತೆ ತಿಳಿಸಬೇಕು. ಕಾಂಗ್ರೆಸ್ ಹಳೇ ಪಕ್ಷ. ಅಶಿಸ್ತು ವಿರುದ್ಧ ಕ್ರಮ ಕೈಗೊಳ್ಳುವಂತೆ ನೂತನ ಅಧ್ಯಕ್ಷರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *