ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಮತ್ತೆ ವಿಳಂಬ – ಜ್ವೆಜ್ಡಾ ಸೇವಾ ಮಾಡ್ಯೂಲ್‌ ದುರಸ್ತಿ ಬಳಿಕ ಮಿಷನ್ ಶುರು

By
3 Min Read

ನವದೆಹಲಿ/ವಾಷಿಂಗ್ಟನ್‌: ಜೂನ್‌ 19ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ತೆರಳಬೇಕಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಸೇರಿ ನಾಲ್ವರ ಯಾನ ಮತ್ತೆ ವಿಳಂಭವಾಗಿದೆ. ಜೂನ್‌ 22ರಂದು ಸಂಭಾವ್ಯ ಉಡಾವಣಾ ದಿನಾಂಕ ಪ್ರಕಟಿಸುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ತಿಳಿಸಿದೆ.

ಫಾಲ್ಕನ್ 9 ಉಡಾವಣಾ ವಾಹನದಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆ ಬಾಹ್ಯಾಕಾಶ ಯಾನ ಮುಂದೂಡಿಕೆಯಾಗಿದೆ. ಕಳೆದ ವಾರ ಉಡಾವಣಾ ಪ್ಯಾಡ್‌ನಲ್ಲಿ ಏಳು ಸೆಕೆಂಡುಗಳ ಬಿಸಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯ ಸಮಯದಲ್ಲಿ ಪ್ರೊಪಲ್ಷನ್ ಬೇಯಲ್ಲಿ LOX ಸೋರಿಕೆ ಪತ್ತೆಯಾಗಿತ್ತು. ಈ ಕುರಿತು ಇಸ್ರೋ ತಂಡ ಆ್ಯಕ್ಸಿಯಂ-4 ಮತ್ತು ಸ್ಪೇಸ್ ಎಕ್ಸ್‌ನ ತಜ್ಞರೊಂದಿಗೆ ಚರ್ಚೆ ನಡೆಸಿ, ಸೋರಿಕೆ ಸರಿಪಡಿಸಲು ಮತ್ತು ಉಡಾವಣೆಗೆ ತೆರವುಗೊಳಿಸುವ ಮೊದಲು ಅಗತ್ಯ ಮೌಲ್ಯೀಕರಣ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಈ ಎಲ್ಲ ಪ್ರಕ್ರಿಯೆ ಮುಕ್ತಾಯದ ಬಳಿಕ ಜೂನ್‌ 19ರಂದು ಮಿಷನ್‌ ಶುರು ಮಾಡಲು ದಿನಾಂಕ ನಿಗದಿಪಡಿಸಲಾಗಿತ್ತು. ಇದನ್ನೂ ಓದಿ: ಭಾರತಕ್ಕೆ ಯಾವುದೇ ದೇಶದ ಮಧ್ಯಸ್ಥಿಕೆ ಅಗತ್ಯವಿಲ್ಲ: ಟ್ರಂಪ್‌ಗೆ ಮೋದಿ ಸ್ಪಷ್ಟನೆ

ಸದ್ಯ ತಾಂತ್ರಿಕ ದೋಷ ಸರಿಪಡಿಸುವ ಪ್ರಕ್ರಿಯೆ ಈವರೆಗೆ ಪೂರ್ಣಗೊಳ್ಳದ ಕಾರಣ ಜೂನ್‌ 22ಕ್ಕೆ ಮುನ್ನ ʻಆ್ಯಕ್ಸಿಯಂ-4ʼ ಆರಂಭಿಸುವುದು ಅಸಾಧ್ಯವಾಗಿದೆ. ಇದನ್ನೂ ಓದಿ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿಯಾದ ಮೋದಿ – ಹೊಸ ಹೈಕಮೀಷನರ್ ನೇಮಿಸಲು ಸಮ್ಮತಿ

ಜೂನ್‌ 22ಕ್ಕೂ ಮುನ್ನ ʻಆ್ಯಕ್ಸಿಯಂ-4′ ಅನ್ನು ಉಡಾವಣೆ ಮಾಡುವ ಗುರಿಯನ್ನು ನಾಸಾ, ಆಕ್ಸಿಯಮ್ ಸ್ಪೇಸ್ ಮತ್ತು ಸ್ಪೇಸ್‌ಎಕ್ಸ್ ಹೊಂದಿಲ್ಲ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಜ್ವೆಜ್ಡಾ ಸೇವಾ ಮಾಡ್ಯೂಲ್‌ನಲ್ಲಿನ ದುರಸ್ತಿ ಕಾರ್ಯ, ಆರೋಹಣ ಕಾರಿಡಾರ್ ಹವಾಮಾನ ಪರಿಸ್ಥಿತಿ, ಕ್ವಾರಂಟೈನ್‌ನಲ್ಲಿರುವ ಸಿಬ್ಬಂದಿಯ ಆರೋಗ್ಯ ಮತ್ತು ಸನ್ನದ್ಧತೆ ಎಲ್ಲವನ್ನು ಪರಿಶೀಲಿಸಿದ ಬಳಿಕ ಜೂನ್‌ 22ರಂದು ಸಂಭಾವ್ಯ ಉಡಾವಣಾ ದಿನಾಂಕ ಪ್ರಕಟಿಸಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ತನ್ನ ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದೆ.

ಏನಿದು ಮಿಷನ್‌?
ಬಾಹ್ಯಾಕಾಶ ಪ್ರಯಾಣದಲ್ಲಿ ಮೈಲಿಗಲ್ಲು ಸಾಧಿಸಲು ಭಾರತ ಸಜ್ಜಾಗಿದ್ದು, ಗಗನಯಾತ್ರಿ ಅಥವಾ ನಿಯೋಜಿತ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (International Space Station) ಶೀಘ್ರದಲ್ಲೇ ಹಾರಲಿದ್ದಾರೆ. ಶುಕ್ಲಾ ಅವರೊಂದಿಗೆ ಮೂವರು ಗಗನಯಾನಿಗಳು ಸಹ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಪ್ರಯಾಣ ಬೆಳೆಸಲಿದ್ದಾರೆ. ಇದಕ್ಕಾಗಿ ಎಲಾನ್‌ ಮಸ್ಕ್‌ ನೇತೃತ್ವದ ಸ್ಪೇಸ್‌-ಎಕ್ಸ್‌ (SpaceX) ಸಂಸ್ಥೆಯು ʻಡ್ರ್ಯಾಗನ್ʼ (Dragon) ಎಂಬ ಬಾಹ್ಯಾಕಾಶ ನೌಕೆಯನ್ನೂ ಸಿದ್ಧಪಡಿಸಿದ್ದು, ಉಡಾವಣೆಗೆ ಸಜ್ಜುಗೊಳಿಸಲಾಗಿದೆ. ಈ ಡ್ರ್ಯಾಗನ್‌ ನೌಕೆಯನ್ನು ಸ್ಪೆಸ್‌-ಎಕ್ಸ್‌ ಮರುಬಳಕೆ ಮಾಡಬಹುದಾದ ಫಾಲ್ಕನ್‌-9 ರಾಕೆಟ್‌ನಲ್ಲಿ ಸಂಯೋಜಿಸಿದೆ. ಇದನ್ನೂ ಓದಿ: ಇಸ್ರೇಲ್-ಇರಾನ್ ಯುದ್ಧ ಭೀತಿ; ಭಾರತಕ್ಕೆ ಹೆಚ್ಚಿದ ಆತಂಕ

ʻಆ್ಯಕ್ಸಿಯಂ-4ʼ ಕಾರ್ಯಕ್ರಮದ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳುತ್ತಿರುವ ಶುಕ್ಲಾ ಅವರೊಂದಿಗೆ, ಕಮಾಂಡರ್ ಪೆಗ್ಗಿ ವಿಟ್ಸನ್, ಹಂಗರಿಯ ಟಿಬೊರ್ ಕಾಪು ಹಾಗೂ ಪೋಲಂಡ್‌ನ ಸ್ಲಾವೋಸ್ ಯು.ವಿವ್‌ಕಿ ಕೂಡ ಪಯಣಿಸಲಿದ್ದಾರೆ. ಒಟ್ಟು 14 ದಿನಗಳ ಕಾರ್ಯಾಚರಣೆ ಇದಾಗಿದೆ. ಪ್ರಯಾಣ ಶುರುವಾದ ಅಂದಾಜು 28 ಗಂಟೆ ಪ್ರಯಾಣದ ಬಳಿಕ, ಜೂನ್ 11ರಂದು ಭಾರತೀಯ ಕಾಲಮಾನ ರಾತ್ರಿ 10.30ರ ವೇಳೆಗೆ ನಾಲ್ವರು ಗಗನಯಾನಿಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಲಿದ್ದಾರೆ. ಬಳಿಕ ಡ್ರ್ಯಾಗನ್‌ ಗಗನನೌಕೆಯನ್ನು ಐಎಸ್‌ಎಸ್‌ನೊಂದಿಗೆ ಜೋಡಣೆ (ಡಾಕಿಂಗ್) ಮಾಡಲಾಗುತ್ತದೆ. ಇದನ್ನೂ ಓದಿ: ತಾಂತ್ರಿಕ ದೋಷ – ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ 

ಗಮನಿಸಬೇಕಾದ ಮುಖ್ಯಾಂಶಗಳು
* ನಾಲ್ವರು ಗಗನಯಾನಿಗಳು ಮೇ 25ರಿಂದ ಪ್ರತ್ಯೇಕವಾಸದಲ್ಲಿ (ಕ್ವಾರಂಟೈನ್) ಇದ್ದಾರೆ.
* 14 ದಿನ ಬಾಹ್ಯಾಕಾಶ ನಿಲ್ದಾಣದಲ್ಲಿ ವಾಸ್ತವ್ಯ ಇರಲಿದ್ದಾರೆ. ಈ ವೇಳೆ ಗಗನಯಾನಿಗಳು ಪ್ರಧಾನಿ ನರೇಂದ್ರ ಮೋದಿ ಶಾಲಾ ವಿದ್ಯಾರ್ಥಿಗಳು ಹಾಗೂ ಬಾಹ್ಯಾಕಾಶ ಕ್ಷೇತ್ರದ ಕಂಪನಿಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸುವ ಸಾಧ್ಯತೆಗಳೂ ಇವೆ.
* ಶುಕ್ಲಾ ಅವರು ಐಎಸ್‌ಎಸ್‌ನಲ್ಲಿ ಆಹಾರ ಮತ್ತು ಪೌಷ್ಟಿಕತೆಗೆ ಸಂಬಂಧಿಸಿದ ಪ್ರಯೋಗಗಳನ್ನು ನಡೆಸಲಿದ್ದಾರೆ. ಇಸ್ರೋ ಹಾಗೂ ಬಯೊಟೆಕ್ನಾಲಜಿ ಇಲಾಖೆ ಇದಕ್ಕೆ ಸಹಯೋಗ ನೀಡಲಿವೆ.
* ಶುಕ್ಲಾ ಅವರ ಬಾಹ್ಯಾಕಾಶ ಅನುಭವವನ್ನು ಉದ್ದೇಶಿತ ಗಗನಯಾನ ಕಾರ್ಯಕ್ರಮಕ್ಕೆ ಬಳಸಿಕೊಳ್ಳಲು ಇಸ್ರೋ ಯೋಜಿಸಿದೆ.
* ಆ್ಯಕ್ಸಿಯಂ-4 ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಇಸ್ರೋ 550 ಕೋಟಿ ರೂ. ವೆಚ್ಚ ಮಾಡಲಿದೆ.

Share This Article