ಟೀಂ ಇಂಡಿಯಾಕ್ಕೆ ಆಘಾತ – ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಶುಭಮನ್ ಅನುಮಾನ

Public TV
1 Min Read

ನವದೆಹಲಿ: 2023ರ ವಿಶ್ವಕಪ್ ಕ್ರಿಕೆಟ್‍ನ (World Cup) ಮೊದಲ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಕ್ಕೆ (Team India) ಭಾರೀ ಆಘಾತವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಆರಂಭಿಕ ಆಟಗಾರ ಶುಭಮನ್ ಗಿಲ್‍ಗೆ (Shubman Gill) ಡೆಂಗ್ಯೂ ಖಚಿತವಾಗಿದೆ. ಇದರಿಂದಾಗಿ ಅವರು ಭಾನುವಾರ (ಅ.8) ಆಸ್ಟ್ರೇಲಿಯಾ (Australia) ವಿರುದ್ಧದ ಪಂದ್ಯದಲ್ಲಿ ಆಡುವುದು ಬಹುತೇಕ ಅನುಮಾನ.

ಟೀಂ ಇಂಡಿಯಾ ವಿಶ್ವಕಪ್ ದಂಡಯಾತ್ರೆಯನ್ನು ರೋಹಿತ್ ಶರ್ಮಾ ನಾಯಕತ್ವದಲ್ಲಿ ಅಕ್ಟೋಬರ್ 8 ರಂದು ಪ್ರಾರಂಭಿಸಲಿದೆ. ಚೆನ್ನೈನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಆದರೆ ಪಂದ್ಯಕ್ಕೂ ಮುನ್ನ ಶುಭಮನ್ ಗಿಲ್ ಅನಾರೋಗ್ಯದಿಂದ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ಇದನ್ನೂ ಓದಿ: Asian Games: ಬಾಂಗ್ಲಾ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ – ಫೈನಲಿಗೆ ಭಾರತ

ಟೀಂ ಮ್ಯಾನೇಜ್‍ಮೆಂಟ್ ಗಿಲ್ ಮೇಲೆ ತೀವ್ರ ನಿಗಾ ಇಟ್ಟಿದೆ. ಇಂದು ಗಿಲ್‍ಗೆ ಮತ್ತೊಂದು ಪರೀಕ್ಷೆ ನಡೆಯಲಿದೆ. ಇದರ ನಂತರ ಅವರ ಆಟದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ವರದಿಯಾಗಿದೆ.

ಗಿಲ್ ಈ ಪಂದ್ಯವನ್ನು ಆಡದಿದ್ದರೆ, ರೋಹಿತ್ ಶರ್ಮಾ ಅವರೊಂದಿಗೆ ಇಶಾನ್ ಕಿಶನ್ ಅಥವಾ ಕೆಎಲ್ ರಾಹುಲ್ ಅವರು ಆರಂಭಿಕ ಆಟಗಾರರಾಗಿ ಕಣಕ್ಕೆ ಇಳಿಯುವ ಸಾಧ್ಯತೆಯಿದೆ.

ಸದ್ಯಕ್ಕೆ ಗಿಲ್ ಅತ್ಯುತ್ತಮ ಫಾರ್ಮ್ ಹೊಂದಿದ್ದಾರೆ. ಈ ವರ್ಷದ ಆರಂಭದಲ್ಲಿ ಅವರು ನ್ಯೂಜಿಲೆಂಡ್ ವಿರುದ್ಧ ರೋಚಕ ದ್ವಿಶತಕ ಗಳಿಸಿದ್ದರು. ಇತ್ತೀಚೆಗೆ 2023 ರ ಏಷ್ಯಾ ಕಪ್‍ನಲ್ಲಿ ಗಿಲ್ ಒಟ್ಟು 302 ರನ್‍ಗಳನ್ನು ಗಳಿಸಿದ್ದರು. ಇದನ್ನೂ ಓದಿ: ಆಂಗ್ಲರ ವಿರುದ್ಧ ಶತಕ ಸಿಡಿಸಿ ಮೆರೆದಾಡಿದ ಬೆಂಗ್ಳೂರು ಮೂಲದ ರಚಿನ್‌ ರವೀಂದ್ರ ಯಾರು ಗೊತ್ತಾ?

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್