ಕ್ರಿಕೆಟ್‌ ದೇವರನ್ನು ಆಕಸ್ಮಿಕವಾಗಿ ಭೇಟಿಯಾದ ಸಿಎಂ – ಒಂದೇ ಫ್ರೇಮ್‌ನಲ್ಲಿ ಸಚಿನ್‌, ಸಿದ್ದು

Public TV
2 Min Read

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದು ಕ್ರಿಕೆಟ್‌ ದಂತಕಥೆ ಸಚಿನ್ ತೆಂಡೂಲ್ಕರ್‌ರನ್ನ (Sachin Tendulkar) ಆಕಸ್ಮಿಕವಾಗಿ ಭೇಟಿಯಾದ ಪ್ರಸಂಗ ನಡೆಯಿತು.

ದೆಹಲಿಯ ವಿಮಾನ ನಿಲ್ದಾಣದಲ್ಲಿ (Delhi Airport) ಗುರುವಾರ ಸಚಿನ್‌ ತೆಂಡೂಲ್ಕರ್‌ ಅವರು ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟರು. ಈ ಸಂತಸವನ್ನು ಸಿಎಂ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ ಅವರು, ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: Virat Kohli: ಸಚಿನ್‌ ತೆಂಡೂಲ್ಕರ್‌ ಮತ್ತೊಂದು ದಾಖಲೆ ಉಡೀಸ್‌ ಮಾಡಿದ ಕೊಹ್ಲಿ!

ಟೀಂ ಇಂಡಿಯಾ ಮಾಜಿ ನಾಯಕರೂ ಆಗಿರುವ ಸಚಿನ್‌ ತೆಂಡೂಲ್ಕರ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹತ್ವದ ಮೈಲುಗಲ್ಲು ಸಾಧಿಸಿದ್ದಾರೆ. ಈಗಲೂ ಸಚಿನ್‌ ಹೆಸರಿನಲ್ಲಿರುವ ಮಹತ್ವದ ದಾಖಲೆಗಳು ಯಾರೂ ಮುರಿಯಲಾಗದೇ ಸಾರ್ವಕಾಲಿಕವಾಗಿ ಉಳಿದುಕೊಂಡಿವೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 15,921 ರನ್‌ ಸಿಡಿಸಿರುವ ತೆಂಡೂಲ್ಕರ್‌, ಬರೋಬ್ಬರಿ 51 ಶತಕಗಳನ್ನು ಸಿಡಿಸಿದ್ದಾರೆ. ಸುದೀರ್ಘ ಸ್ವರೂಪದಲ್ಲಿ ಇಷ್ಟೊಂದು ಶತಕ ಯಾರೂ ಸಿಡಿಸಿಲ್ಲ. ಏಕದಿನ ಕ್ರಿಕೆಟ್‌ನಲ್ಲಿ 49 ಶತಕಗಳೊಂದಿಗೆ 18,426 ರನ್‌ಗನ್‌ಗಳ ಪೇರಿಸಿ ವಿಶ್ವದ ಗರಿಷ್ಠ ರನ್‌ಗಳಿಸಿದ ಏಕೈಕ ಆಟಗಾರನಾಗಿದ್ದಾರೆ.

2023ರಲ್ಲಿ ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾದ ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಸಚಿವ್‌ ಅವರ 49 ಶತಕಗಳ ದಾಖಲೆಯನ್ನ ನುಚ್ಚುನೂರು ಮಾಡಿದರು. ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್‌ ವೃತ್ತಿ ಬದುಕಿನ 50ನೇ ಶತಕ ದಾಖಲಿಸಿದರು. ಇದು ಏಕದಿನ ಕ್ರಿಕೆಟ್‌ನಲ್ಲಿ ಆಟಗಾರನೊಬ್ಬ ಸಿಡಿಸಿದ ಅತಿಹೆಚ್ಚು ಶತಕಗಳಾಗಿವೆ. ಆದ್ರೆ ಅವರ ಒಟ್ಟಾರೆ ಗರಿಷ್ಠ ಸ್ಕೋರ್‌ ದಾಖಲೆಯನ್ನು ಈವರೆಗೆ ಯಾರೂ ಮುರಿದಿಲ್ಲ. ಇದನ್ನೂ ಓದಿ: 20 ವರ್ಷಗಳ ಹಿಂದಿನ ಸಚಿನ್‌ ವಿಶ್ವದಾಖಲೆಯನ್ನು ಮುರಿದ ಕೊಹ್ಲಿ

Share This Article