ಕಲಬುರಗಿ: ಪ್ರವಾಹ ಪೀಡಿತ ಕಲ್ಯಾಣ ಕರ್ನಾಟಕ (Kalyana Karnataka) ಭಾಗಗಳಾದ ಕಲಬುರಗಿ, ವಿಜಯಪುರ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಂದು ವೈಮಾನಿಕ ಸಮೀಕ್ಷೆ ನಡೆಸಿದರು.
ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭೀಮಾ ನದಿ ಪ್ರವಾಹದಿಂದ ತತ್ತರಿಸಿರುವ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ, ಕೃಷಿಭೂಮಿ, ಮನೆಗಳು ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಆಗಿರುವ ಹಾನಿ ವೀಕ್ಷಿಸಿದೆ. pic.twitter.com/ZS92yvDYLZ
— Siddaramaiah (@siddaramaiah) September 30, 2025
ಮಂಗಳವಾರ (ಸೆ.30) ಬೆಳಗ್ಗೆ 10:45ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಅವರು ಕಲಬುರಗಿ ವಿಮಾನ ನಿಲ್ದಾಣಕ್ಕೆ (Kalaburagi Airport) ಆಗಮಿಸಿ, ಬಳಿಕ ವಿಮಾನ ನಿಲ್ದಾಣದಲ್ಲೇ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು. ನಂತರ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆಗೆ ತೆರಳಿದರು. ಈ ವೇಳೆ ನಾಲ್ಕು ಜಿಲ್ಲೆಗಳ ಹನ್ನೊಂದು ಪಾಯಿಂಟ್‌ನಲ್ಲಿ ಸಮೀಕ್ಷೆ ನಡೆಸಿದರು. ಸಿಎಂ ಜೊತೆ ವೈಮಾನಿಕ ಸಮೀಕ್ಷೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಹಾಗೂ ಎಂ.ಬಿ ಪಾಟೀಲ್, ಶರಣಪ್ರಕಾಶ್ ಪಾಟೀಲ್ ಭಾಗಿಯಾಗಿದ್ದರು.ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಬಂದ್ರು ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ – ಸಿಸಿ ಪಾಟೀಲ್
ಸಮೀಕ್ಷೆ ಬಳಿಕ ಸಂಜೆ 4:30ಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ಪರಿಹಾರ ವಿತರಣೆ ಬಗ್ಗೆ ಮಾಹಿತಿ ನೀಡಲಿದ್ದಾರೆ.