ಸಿದ್ದರಾಮಯ್ಯ ಯುರೋಪ್ ಪ್ರವಾಸಕ್ಕೆ ಸಮ್ಮಿಶ್ರ ಸರ್ಕಾರದಲ್ಲಿ ಆತಂಕ..!

Public TV
2 Min Read

ಬೆಂಗಳೂರು: ಮಾಜಿ ಸಿಎಂ ಹಾಗು ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಸಿದ್ದರಾಮಯ್ಯರ ಯುರೋಪ್ ಪ್ರವಾಸ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಸಿದ್ದರಾಮಯ್ಯನವರು ಸ್ಥಳೀಯ ಚುನಾವಣೆ ಬಳಿಕ ಪ್ರವಾಸ ಕೈಗೊಳ್ಳುವ ಮೂಲಕ ಡಿಸಿಎಂ ಜಿ.ಪರಮೇಶ್ವರ್ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಶಾಕ್ ನೀಡಲು ಮುಂದಾಗಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ಅಂಗಳದಲ್ಲಿ ಹರಿದಾಡುತ್ತಿವೆ.

ಇಷ್ಟು ದಿನ ಆಷಾಢ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಲಾಗುತ್ತಿತ್ತು. ಆದ್ರೆ ಕಾಂಗ್ರೆಸ್ ಸ್ಥಳೀಯ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಮಾಡೋದು ಸೂಕ್ತ ಎಂದು ಕಾಂಗ್ರೆಸ್ ಹಿರಿಯ ನಾಯಕರು ಚಿಂತಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಚುನಾವಣೆಗೆ ಮುನ್ನ ಸಂಪುಟ ವಿಸ್ತರಣೆವಾದ್ರೆ ಸಚಿವ ಸ್ಥಾನ ಸಿಗದ ಅಸಮಾಧಾನಿತ ಶಾಸಕರ ಕ್ಷೇತ್ರಗಳಲ್ಲಿ ಚುನಾವಣೆ ಗೆಲ್ಲೋದು ಕಷ್ಟ ಎಂದು ಕಾಂಗ್ರೆಸ್ ಲೆಕ್ಕಾಚಾರ ಹಾಕುತ್ತಿದೆ. ಹಾಗಾಗಿ ಸಂಪುಟ ವಿಸ್ತರಣೆಯ ದಿನಾಂಕ ಮುಂದೂಡುವ ಕುರಿತು ಕಾಂಗ್ರೆಸ್ ನಲ್ಲಿ ಚರ್ಚೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ.

ಈ ಎಲ್ಲ ಗೊಂದಲಗಳ ನಡುವೆಯೇ ಸಿದ್ದರಾಮಯ್ಯನವರು ಯುರೋಪ್ ಪ್ರವಾಸ ಕೈಗೊಳ್ಳುತ್ತೀರೋದು ಕಾಂಗ್ರೆಸ್ ಶಾಸಕರ ಅಸಮಾಧಾನಕ್ಕೆ ಕಾರಣ ಎನ್ನಲಾಗುತ್ತಿದೆ. ಸೆಪ್ಟೆಂಬರ್ 2ರಂದು ಯುರೋಪ್ ಗೆ ತೆರಳಿದ್ರೆ ಸೆ.13ಕ್ಕೆ ವಾಪಾಸ್ಸ ಆಗಲಿದ್ದಾರೆ. ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಆದರೂ ಸಿದ್ದರಾಮಯ್ಯ ಯುರೋಪ್ ಪ್ರವಾಸದಲ್ಲಿ ಇರುತ್ತಾರೆ. ಸಚಿವ ಸಿಗದ ಅಸಮಾಧಾನಿತರ ಕೈಗೆ ಮಾಜಿ ಸಿಎಂ ಸಿಗಲ್ಲ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಶಾಸಕರು ಪ್ರವಾಸಕ್ಕೂ ಮುನ್ನವೇ ಸಂಪುಟ ವಿಸ್ತರಣೆ ನಡೆಯಬೇಕೆಂದು ಬಿಗಿಪಟ್ಟು ಹಿಡಿದಿದ್ದಾರಂತೆ. ಸ್ಥಳೀಯ ಚುನಾವಣೆ ಮುಗಿಯವರೆಗೂ ನಮಗೆ ಕಾಯೋದಕ್ಕೆ ಆಗಲ್ಲ ಎಂದು ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸಭೆ ನಡೆದಿದೆ ಎನ್ನಲಾಗಿದೆ. ಸಭೆಯಲ್ಲಿ ಸ್ಥಳೀಯ ಚುನಾವಣೆಯ ದಿನಾಂಕ ಸಮೀಪಿಸುತ್ತಿದ್ದು, ಕಾಂಗ್ರೆಸ್‍ನಲ್ಲಿ ಹಣಕಾಸಿನ ಸಮಸ್ಯೆ ಕಾಣಿಸಿಕೊಂಡಿದೆಯಂತೆ. ಈ ಸಂಬಂಧ ಚುನಾವಣೆಗೆ ಹಣ ಹೇಗೆ ಹೊಂದಿಸಬೇಕು? ಹೇಗೆ ವ್ಯಯಿಸಬೇಕೆಂಬುದರ ಬಗ್ಗೆ ರಹಸ್ಯ ಮಾತುಕತೆಗಳು ನಡೆದಿವೆಯಂತೆ. ಪಕ್ಷ ಕರೆದ ಸಭೆಗೆ ಸಚಿವ ಸ್ಥಾನ ಆಕಾಂಕ್ಷಿಗಳು ದೂರ ಉಳಿದಿದ್ದು, ಅಧಿಕಾರ ಮಾತ್ರ ನಿಮಗೆ ಹಣ ನಮ್ಮದು ಹೇಗೆ ಅಂತಾ ಹಿರಿಯ ನಾಯಕರನ್ನು ಪ್ರಶ್ನಿಸುತ್ತಿದ್ದಾರಂತೆ. ಮೊದಲು ಸಂಪುಟ ವಿಸ್ತರಣೆ ಮಾಡಿ, ಆಮೇಲೆ ಹಣ ಕೇಳಿ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಕೆಪಿಸಿಸಿ ಅಧ್ಯಕ್ಷರನ್ನು ಪ್ರಶ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Share This Article
Leave a Comment

Leave a Reply

Your email address will not be published. Required fields are marked *