ಹೈಕಮಾಂಡ್ ನಯಾ ಪೈಸೆ ಕೇಳಿಲ್ಲ- ಬಿಜೆಪಿ ಆರೋಪಕ್ಕೆ ಸಿಎಂ ಕಿಡಿ

Public TV
2 Min Read

ಮೈಸೂರು: ನಮಗೆ ಈವರೆಗೂ ಹೈಕಮಾಂಡ್ ನಯಾ ಪೈಸೆ ಹಣ ಕೇಳಿಲ್ಲ ಎಂದು ಹೇಳುವ ಮೂಲಕ ಚುನಾವಣೆಗೆ ಕಾಂಗ್ರೆಸ್ (Congress) ಹಣ ಸಂಗ್ರಹಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ತಿರುಗೇಟು ನಿಡಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ಮಾಡುತ್ತಿರುವ ಎಲ್ಲಾ ಆರೋಪಗಳು ಸುಳ್ಳು. ಅವೆಲ್ಲವೂ ನಿರಾಧಾರ. ಗುತ್ತಿಗೆದಾರನನ್ನ ಬಿಜೆಪಿ, ಕಾಂಗ್ರೆಸ್ ಗುತ್ತಿಗೆದಾರ ಅಂಥ ಹೇಳೊದಕ್ಕೆ ಆಗುತ್ತಾ..?, ಈಗ ನಾನು ಹೇಳುತ್ತೇನೆ. ಅವನು ಬಿಜೆಪಿ ಗುತ್ತಿಗೆದಾರ ಅಂಥ. ಅದನ್ನ ಯಾರಾದರೂ ಒಪ್ಪಿಕೊಳ್ಳುತ್ತಾರಾ ಎಂದು ಪ್ರಶ್ನಿಸಿದರು.

5 ರಾಜ್ಯ ಚುನಾವಣೆಗೂ ನಮಗೂ ಏನೂ ಸಂಬಂಧ. ನಾವೆನಾದರೂ ನಮ್ಮ ಚುನಾವಣೆಗೆ ಹೋಗಿ ಯಾರನ್ನದರೂ ಕೇಳಿದ್ದೀವಾ?. ಈಗ ಅವರಿಗೆ ಕೊಡಬೇಕು ಅವರಿಗೆ ಕೊಡಬೇಕು ಅನ್ನುವ ಪ್ರಶ್ನೆಯಲ್ಲಿ ಅರ್ಥವೇ ಇಲ್ಲ. ಬಿಜೆಪಿಯವರು ಸುಖಾ ಸುಮ್ಮನೇ ಆರೋಪ ಮಾಡುತ್ತಾರೆ. ಇದು ಸರ್ಕಾರದ ಹಣ ಅಂತಾ ಐಟಿ ಏನಾದರೂ ಹೇಳಿದ್ಯಾ?. ಐಟಿ (Income Tax Raid) ಏನಾದರೂ ಸರ್ಕಾರದ ಮೇಲೆ ಆರೋಪ ಮಾಡಿದ್ಯಾ?. ಇದರ ಬಗ್ಗೆ ನಾವೇಕೆ ತನಿಖೆ ಮಾಡಬೇಕು. ಐಟಿ ದಾಳಿಗಳು ಸಾಮಾನ್ಯವಾಗಿ ನಡೆಯುತ್ತದೆ. ಈ ದಾಳಿ ಕೂಡ ಅದರ ಭಾಗ ಅಷ್ಟೇ. ಇದನ್ನು ರಾಜಕೀಯಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಅಷ್ಟೇ ಎಂದು ಸಿದ್ದರಾಮಯ್ಯ ಗರಂ ಆದರು. ಇದನ್ನೂ ಓದಿ: ಬಸ್, ಟಾಟಾ ಸುಮೋ ನಡುವೆ ಮುಖಾಮುಖಿ ಡಿಕ್ಕಿ – ಐವರು ಸ್ಥಳದಲ್ಲೇ ಸಾವು

ಕರ್ನಾಟಕದಲ್ಲಿ ವಿದ್ಯುತ್ (Electricity) ಸಮಸ್ಯೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿದ್ಯುತ್ ಸಮಸ್ಯೆ ಹಾಗೂ ಲೋಡ್ ಶೆಡ್ಡಿಂಗ್ (Load Shedding) ಅನ್ನು ಅಧಿಕೃತವಾಗಿ ಒಪ್ಪಿಕೊಂಡರು. 2 ರಿಂದ ಮೂರು ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಬಿಜೆಪಿ ಸರ್ಕಾರದಲ್ಲಿ ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ವಿದ್ಯುತ್ ಉತ್ಪಾದನೆ ನಡೆಯಲಿಲ್ಲ. ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಹೊರಗಡೆ ವಿದ್ಯುತ್ ಖರೀದಿ ಮಾಡಲು ಕೂಡ ನಾನು ಸೂಚನೆ ಕೊಟ್ಟಿದ್ದೇನೆ. ಸಕ್ಕರೆ ಕಾರ್ಖಾನೆಯಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚನೆ ನೀಡಿದ್ದೇವೆ. ಆದಷ್ಟು ರೈತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ. ರೈತರು ನಿರಂತರವಾಗಿ ನಾಲ್ಕು ಗಂಟೆ ತ್ರಿ ಫೇಸ್ ವಿದ್ಯುತ್ ಕೊಟ್ಟರೆ ಸಾಕು ಎಂದು ಹೇಳುತ್ತಿದ್ದಾರೆ. ಎಲ್ಲದರ ವ್ಯವಸ್ಥೆ ಮಾಡುತ್ತಿದ್ದೇವೆ ಎಂದರು.

ರಾಜ್ಯದಲ್ಲಿ ಕುಡಿಯುವ ನೀರು, ಮೇವಿನ ಕೊರತೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳು ಬರಪೀಡಿತವಾಗಿವೆ. 42 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯಿಲ್ಲ. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ಬಿದ್ದರೆ ಹೊಸದಾಗಿ ಬೋರ್ ವೆಲ್ ಗಳನ್ನು ಕೊರೆಸುವಂತೆ ಸೂಚಿಸಲಾಗಿದೆ. ಮೇವಿನ ಕೊರತೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್