ಬೆಂಗಳೂರು: ಸಿದ್ದರಾಮಯ್ಯ (Siddaramaiah) ಮಾಸ್ ಲೀಡರ್. ನನ್ನ ಮತ್ತು ಅವರ ಸಂಬಂಧ ಹಾಳು ಮಾಡಲು ಉದ್ದೇಶಪೂರ್ವಕವಾಗಿ ಯತ್ನ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ (BR Patil) ಸ್ಪಷ್ಟನೆ ನೀಡಿದ್ದಾರೆ.
ಸಿದ್ದರಾಮಯ್ಯ ಲಾಟರಿ ಸಿಎಂ ಹೇಳಿಕೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಸೋನಿಯಾ ಗಾಂಧಿಯವರನ್ನು (Sonia Gandhi) ಭೇಟಿ ಮಾಡಲ್ಲ ಎಂದಾಗ ಭೇಟಿ ಮಾಡೋಣ ಎಂದು ಹೇಳಿದ್ದೆ ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಲಾಟರಿ ಸಿಎಂ, ನನಗೆ ಸಿದ್ಧಾಂತವೇ ಗಾಡ್ ಫಾದರ್: ಹೇಳಿಕೆ ಸಮರ್ಥಿಸಿದ ಬಿಆರ್ ಪಾಟೀಲ್
ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಸಿದ್ದರಾಮಯ್ಯನವರನ್ನು ನಾವು ಸಿಎಂ ಮಾಡಿಲ್ಲ. ಸಿದ್ದರಾಮಯ್ಯಗೆ ಸಾಥ್ ಕೊಟ್ಟು ನಾನು ಜೆಡಿಎಸ್ (JDS) ತೊರೆದೆ ಎಂದು ಹೇಳಿದರು.
ನನ್ನ ಮತ್ತು ಸಿದ್ದರಾಮಯ್ಯನವರ ಸಂಬಂಧ ಉದ್ದೇಶಪೂರ್ವಕವಾಗಿ ಹಾಳು ಮಾಡಲು ವಿಡಿಯೋ ಬಿಡುಗಡೆ ಮಾಡಿ ತೇಜೋವಧೆ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.