ಮಾನಸಿಕ ಅಸ್ವಸ್ಥನೆಂದು ಬಿಂಬಿಸಿ ಮುಚ್ಚಿ ಹಾಕಬಾರದು – ಸಂಘ ಪರಿವಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

Public TV
2 Min Read

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬು ಇಟ್ಟಿರುವ ಆರೋಪಿ ಆದಿತ್ಯರಾವ್ ಎಂಬವನ ಬಗ್ಗೆ ನಿಷ್ಪಕ್ಷಪಾತವಾಗಿ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆಳೆಯಬೇಕು ಆತನನ್ನು ಮಾನಸಿಕ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಸಂಬಂಧ ಎರಡು ಟ್ವೀಟ್ ಮಾಡಿರುವ ಅವರು, ನಿರ್ದಿಷ್ಟ ಸಮುದಾಯದ ಬಗ್ಗೆ ಪೂರ್ವಗ್ರಹ ಹೊಂದಿರುವ ಸಂಘ ಪರಿವಾರದ ನಾಯಕರು ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ ಸಾಮಾನ್ಯ ಅಪರಾಧ ಪ್ರಕರಣಗಳಿಗೂ ಕೋಮುಬಣ್ಣ ಬಳಿಯುತ್ತಿರುವುದೇ ಅಲ್ಲಿನ ಶಾಂತಿ ವ್ಯವಸ್ಥೆ ಕದಡಲು ಕಾರಣ. ತಮ್ಮ ಅಜೆಂಡಾಕ್ಕೆ ಬಳಸಲಾಗದ ಪ್ರಕರಣಗಳ ಬಗ್ಗೆ ಅವರ ಮೌನವೇ ಅವರ ದುರುದ್ದೇಶಕ್ಕೆ ಸಾಕ್ಷಿ ಎಂದು ಮಾಜಿ ಸಿಎಂ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಕುಟುಂಬದಿಂದಲೇ ಹೊರ ಹಾಕಿದ್ದೇವೆ, 2 ವರ್ಷದಿಂದ ಸಂಪರ್ಕ ಇಲ್ಲ – ಅಕ್ಷತ್ ರಾವ್

ಆದಿತ್ಯ ರಾವ್ ಬಂಧನ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಈ ಪ್ರಕರಣದಲ್ಲಿ ನಮ್ಮ ಪೊಲೀಸರು ಕ್ಷಿಪ್ರವಾಗಿ ಕೆಲಸ ಮಾಡಿರುವುದು ಅವರ ದಕ್ಷತೆ ಮತ್ತು ಪ್ರಾಮಾಣಿಕತೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ಹೀಗಾಗಿ ಅನಾವಶ್ಯಕವಾಗಿ ಪೊಲೀಸರ ಬಗ್ಗೆ ಟೀಕೆ ಮಾಡಿ ಅವರ ನೈತಿಕತೆಯನ್ನು ಕುಗ್ಗಿಸುವ ಕೆಲಸವನ್ನು ಯಾರು ಮಾಡಬಾರದು. ಪೊಲೀಸರು ತನಿಖೆ ನಡೆಸಿದ ರೀತಿಯಿಂದಲೇ ಆರೋಪಿ ಶರಣಾಗಿದ್ದಾನೆ. ಅದಕ್ಕೆ ನಾವು ಮೊದಲು ಆರೋಪಿ ಇಂತಹ ಸಂಘಟನೆಗೆ ಸೇರಿದವರು ಅಥವಾ ಇಂತಹ ವ್ಯಕ್ತಿ ಎಂದು ಹೇಳಿರಲಿಲ್ಲ. ಯಾರೇ ಆರೋಪಿ ಇದ್ದರು ಅವನನ್ನು ಕಂಡು ಹಿಡಿಯುತ್ತೇನೆ ಎಂದಿದ್ದೆವು. ಆ ಪ್ರಕಾರ ಪೊಲೀಸರು ಪ್ರಾಮಾಣಿಕವಾಗಿ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಗೃಹ ಸಚಿವರು ಪೊಲೀಸರನ್ನು ಶ್ಲಾಘಿಸಿದ್ದರು.

ಆರೋಪಿಯ ವಿರುದ್ಧ ಸಿಕ್ಕ ಸಿಸಿಟಿವಿ ದೃಶ್ಯಾವಳಿ, ಆಟೋ ಹಾಗೂ ಇತರೆ ಸಾಕ್ಷ್ಯಗಳ ಜಾಲವನ್ನು ಹುಡುಕಿ ಹೊರಟಾಗ ಆದಿತ್ಯ ರಾವ್ ಬಗ್ಗೆ ಮಾಹಿತಿ ಸಿಕ್ಕಿತ್ತು. ಉಡುಪಿಯಲ್ಲಿರುವ ಆತನ ಮನೆಗೆ ಹೋಗಿ ತಂದೆ, ತಾಯಿ ಹಾಗೂ ಕುಟುಂಬಸ್ಥರ ಬಳಿ ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿದ್ದರು. ಆ ಬಳಿಕ ಮೂರು ತನಿಖಾ ತಂಡ ರಚಿಸಿ ಈ ಸಂಬಂಧ ತನಿಖೆ ನಡೆಸಲಾಗುತ್ತಿತ್ತು. ಆದರೆ ಆರೋಪಿ ಉಡುಪಿಯಿಂದ ಬೆಂಗಳೂರಿಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಈ ಕೃತ್ಯವೆಸಗಲು ಏನು ಕಾರಣ? ಆತನ ಹಿಂದೆ ಯಾರಿದ್ದಾರೆ? ಎನ್ನುವ ಎಲ್ಲಾ ಮಾಹಿತಿ ತನಿಖೆ ಬಳಿಕ ತಿಳಿದು ಬರಲಿದೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *