ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕ: ಸಿದ್ದರಾಮಯ್ಯ

Public TV
2 Min Read

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವಿಟ್ಟರ್ ಮೂಲಕ ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರು ಮೊದಲ ಟ್ವೀಟ್‍ನಲ್ಲಿ “ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯ ಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ. ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ” ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

https://twitter.com/siddaramaiah/status/1135391118818914304

ಮತ್ತೊಂದು ಟ್ವೀಟ್ ಮಾಡಿದ್ದು, “ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕನ್ನಡಿಗರ ಮೇಲೆ ಹಿಂದೆ ಹೇರಿಕೆಯನ್ನು ಸಹಿಸಲಾಗದು. ಕನ್ನಡ ನಮ್ಮ ಅಸ್ಮಿತೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕೆಂದು ನನ್ನ ಮನವಿ” ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಈ ಹಿಂದೆ ಸಿಎಂ ಕುಮಾರಸ್ವಾಮಿ, “ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್‍ಆರ್‍ಡಿ) ಅವರು ಹೊರಡಿಸಿದ ಶಿಕ್ಷಣ ಕಡು ಕಾರ್ಯನೀತಿಯಲ್ಲಿ ಹಿಂದಿ ಹೇರಿಕೆಯ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಮೂರು ಭಾಷಾ ಸೂತ್ರದ ಹೆಸರಿನಲ್ಲಿ ಒಂದು ಭಾಷೆಯಲ್ಲಿ ಇತರರ ಮೇಲೆ ಯಾವ ಕಾರಣಕ್ಕೂ ಹೇರಬಾರದು. ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ರಾಜ್ಯ ಸರ್ಕಾರದ ನಿಲುವನ್ನು ಕೇಂದ್ರಕ್ಕೆ ತಿಳಿಸಲಾಗುವುದು” ಎಂದು ಟ್ವೀಟ್ ಮಾಡಿದ್ದರು.

ನೀತಿ ಏನು?
ಮಾನವ ಸಂಪನ್ಮೂಲ ಇಲಾಖೆ ಸಲ್ಲಿಸಿರುವ ಕರಡು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಹಲವು ಸುದಾರಣಾ ಕ್ರಮಗಳಿಗೆ ಶಿಫಾರಸು ಮಾಡಲಾಗಿದೆ. ಅದರಲ್ಲಿ ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಭಾಷೆ ಬೋಧನೆಗೆ ಕೂಡ ಆದ್ಯತೆ ನೀಡಲಾಗಿದೆ. ತ್ರಿಭಾಷಾ ಸೂತ್ರವನ್ನು ದೇಶದಾದ್ಯಂತ ಅದರ ಸಂಪೂರ್ಣ ಅರ್ಥದಲ್ಲಿ ಜಾರಿ ಮಾಡಬೇಕಿದೆ. ಬಹುಭಾಷೆಯ ದೇಶದಲ್ಲಿ ಬಹುಭಾಷಾ ಸಂವಹನ ಕೌಶಲವನ್ನು ಅಭಿವೃದ್ಧಿ ಪಡಿಸುವುದಕ್ಕಾಗಿ ಈ ಸೂತ್ರ ಅಗತ್ಯ ಎಂದು ಕರಡು ನೀತಿಯಲ್ಲಿ ಹೇಳಲಾಗಿದೆ.

1968ರ ಮೊದಲ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿಯೇ ತ್ರಿಭಾಷಾ ಸೂತ್ರವನ್ನು ಪ್ರತಿಪಾದಿಸಲಾಗಿದೆ. 1986ರ ನೀತಿಯಲ್ಲಿಯೂ ಅದನ್ನು ಪುನರುಚ್ಚರಿಸಲಾಗಿದೆ. ಆದರೆ ತಮಿಳುನಾಡು ಮಾತ್ರ 1969ರಿಂದಲೂ ದ್ವಿಭಾಷಾ ಸೂತ್ರ ಅನುಸರಿಸುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *