ಸಿದ್ದರಾಮಯ್ಯನವರ ಆಶೀರ್ವಾದ ಇದ್ದವರು ಸಿಎಂ ಆಗ್ತಾರೆ: ರಾಯರೆಡ್ಡಿ

Public TV
1 Min Read

ಕೊಪ್ಪಳ: ಯಾರು ಬೇಕಾದರೂ ಈ ರಾಜ್ಯದ ಸಿಎಂ ಆಗಬಹುದು. ಅದರಂತೆ ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಆಶೀರ್ವಾದ ಬೇಕು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ (Basavaraj Rayareddy) ಮಾರ್ಮಿಕವಾಗಿ ಹೇಳಿದ್ದಾರೆ.

ಕೊಪ್ಪಳ (Koppal) ನಗರದ ಜಿಲ್ಲಾಡಳಿತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನೂ ಲಿಂಗಾಯತ ಸಮುದಾಯಕ್ಕೆ ಸೇರಿದ್ದೇನೆ. ಲಿಂಗಾಯತ ನಾಯಕರಲ್ಲಿ ತುಂಬಾ ಹಿರಿಯನಾಗಿದ್ದೇನೆ. ಕಲ್ಯಾಣ ಕರ್ನಾಟಕದಲ್ಲಿ ಅನೇಕ ಬಾರಿ ಆಯ್ಕೆ ಆಗಿರುವ ಶಾಸಕನಾಗಿದ್ದು, ಲಿಂಗಾಯತ ಸಮುದಾಯಕ್ಕೆ ಅವಕಾಶ ಕೊಡುವುದಾದರೆ ನನಗೆ ಕೊಡಲಿ. ಹುದ್ದೆಗೆ ಆಸೆ ಪಡುವುದರಲ್ಲಿ ತಪ್ಪಿಲ್ಲ. ಆದರೆ, ಯಾರು ಸಿಎಂ ಆಗಬೇಕು ಎಂಬುದನ್ನು ವರಿಷ್ಠರು, ಶಾಸಕರು ತೀರ್ಮಾನ ಮಾಡಬೇಕು ಎಂದರು. ಇದನ್ನೂ ಓದಿ: 10 ವರ್ಷಗಳಿಂದ ಲಿವ್‌ ಇನ್‌ ರಿಲೇಷನ್‌ಶಿಪ್‌ – ಮನೆ ಖರೀದಿಗೆ ಪವಿತ್ರಾಗೆ 1.75 ಕೋಟಿ ಕೊಟ್ಟಿದ್ದ ದರ್ಶನ್‌

ಸಿದ್ದರಾಮಯ್ಯ ಸೂಚಿಸಿದ ವ್ಯಕ್ತಿ ಮುಂದೆ ಸಿಎಂ ಆಗುತ್ತಾರೆ ಎಂಬುದು ನನ್ನ ಅಭಿಪ್ರಾಯವಾಗಿದೆ. ಯಾರಿಗೆ ಯಾವಾಗ ಲಾಟರಿ ಹೊಡೆಯುತ್ತದೆ ಎಂಬುದು ಗೊತ್ತಿಲ್ಲ. ಒಕ್ಕಲಿಗರಲ್ಲಿ ಅನೇಕರು ಹುದ್ದೆಯ ಆಕಾಂಕ್ಷಿ ಇದ್ದಾರೆ. ಡಿ.ಕೆ.ಶಿವಕುಮಾರ್ ಕೂಡಾ ಪ್ರಮುಖ ಎಂದು ಮಾರ್ಮಿಕವಾಗಿ ನುಡಿದರು. ಇದನ್ನೂ ಓದಿ: ಒಪ್ಪಿಗೆ ಪತ್ರ ಇಲ್ಲದೇ ಟ್ರೈನಿ ವೈದ್ಯೆಯ ಮರಣೋತ್ತರ ಪರೀಕ್ಷೆ ಹೇಗೆ ನಡೆಯಿತು? – ಬಂಗಾಳ ಸರ್ಕಾರಕ್ಕೆ ಸುಪ್ರೀಂ ಚಾಟಿ

ರಾಜ್ಯದ ಸಿಎಂ ಆಗಬೇಕು ಎಂದು ಅನೇಕರು ಆಸೆ ಪಡುತ್ತಿದ್ದಾರೆ. ಸಿಎಂ ಹುದ್ದೆಗೆ ಆಸೆ ಪಡುವುದು ತಪ್ಪಲ್ಲ. ಆದರೆ, ಸಿಎಂ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯ ಮುಂದಿನ ಮೂರೂವರೆ ವರ್ಷ ಸಿಎಂ ಆಗಿರುತ್ತಾರೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದು ಯಾರು ಹೇಳುತ್ತಾರೆ? ಕೋರ್ಟ್ ತನಿಖೆಗೆ ಆದೇಶ ನೀಡಿದರೂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬಾರದು. ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ ಎಂಬ ಭರವಸೆ ಇದೆ ಎಂದರು. ಇದನ್ನೂ ಓದಿ: ಕುಡಿದ ನಶೆಯಲ್ಲಿ ಗೆಳೆಯನ ಹತ್ಯೆಗೈದ ಸ್ನೇಹಿತ

Share This Article