ಭಾರತದ ಅತೀ ದೊಡ್ಡ ಕಾಂಪೋಸಿಟ್ ಅನಿಮೇಷನ್ ಡ್ರಾಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಲವ್ ಯೂ ಶಂಕರ್’ (Love You Shankar) ಚಿತ್ರದ ‘ಓಂ ನಮಃ ಶಿವಾಯ’ ಹಾಡನ್ನು ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳು (Siddhalinga Mahaswamyji) ಬಿಡುಗಡೆ ಮಾಡಿದ್ದಾರೆ. ವರ್ಧನ್ ಸಿಂಗ್ ಸಂಗೀತ ಸಂಯೋಜಿಸಿದ್ದಾರೆ.
ರಿಲಯನ್ಸ್ ಎಂಟರ್ ಟೈನ್ ಮೆಂಟ್ ಸ್ಟುಡಿಯೋ ಮತ್ತು ಎಸ್.ಡಿ. ವರ್ಲ್ಡ್ ಫಿಲಂ ಪ್ರೈವೇಟ್ ಲಿಮಿಟೆಡ್ ಜೊತೆಯಾಗಿ ಅರ್ಪಿಸುತ್ತಿರುವ ‘ಲವ್ ಯೂ ಶಂಕರ್’ ಚಿತ್ರವನ್ನು ಜನಪ್ರಿಯ ನಿರ್ದೇಶಕ ‘ಮೈ ಫ್ರೆಂಡ್ ಗಣೇಶ’ ಖ್ಯಾತಿಯ ರಾಜೀವ್ ಎಸ್.ರುಯಾ (Rajeev Ruya) ನಿರ್ದೇಶನ ಮಾಡಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಗೆ ನಾನು ಹೋಗುತ್ತಿಲ್ಲ: ನಟಿ ರಂಜನಿ ರಾಘವನ್ ಸ್ಪಷ್ಟನೆ
‘ಲವ್ ಯೂ ಶಂಕರ್’ ಚಿತ್ರದಲ್ಲಿ ಶ್ರೇಯಸ್ ತಲಪಾಡೆ, ತನಿಷಾ ಮುಖರ್ಜಿ, ಸಂಜಯ್ ಮಿಶ್ರಾ, ಮನ್ ಗಾಂಧಿ, ಅಭಿಮನ್ಯು ಸಿಂಗ್, ಪ್ರತೀಕ್ ಜೈನ್, ಹೇಮಂತ್ ಪಾಂಡೆ ಮುಂತಾದವರು ನಟಿಸಿದ್ದು, ಈ ಚಿತ್ರವು ತನ್ನ ವಿಭಿನ್ನ ಕಥಾಹಂದರ ಮತ್ತು ಅದ್ಭುತ ಅಭಿನಯಗಳ ಮೂಲಕ ಪ್ರೇಕ್ಷಕರಿಗೆ ಹತ್ತಿರವಾಗಲಿದೆ. ತೇಜಸ್ ದೇಸಾಯಿ ಮತ್ತು ಸುನೀತಾ ದೇಸಾಯಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ವರ್ಧನ್ ಸಿಂಗ್ ಮತ್ತು ರಾಮಿರಾ ತನೇಜ ಸಹ-ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಕನ್ನಡ, ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವ ಈ ಚಿತ್ರವು ನವಿರಾದ ಭಾವನೆಗಳು, ಪಾತ್ರಗಳು, ಹಾಡುಗಳು ಮತ್ತು ಕಲಾವಿದರ ಅದ್ಭುತ ಪಾತ್ರಪೋಷಣೆಯಿಂದ ಎಲ್ಲಾ ಭಾಷೆಗಳ ಮತ್ತು ಪ್ರದೇಶಗಳ ಪ್ರೇಕ್ಷಕರಿಗೆ ಆಪ್ತವಾಗಲಿದೆ ಎಂದು ಚಿತ್ರತಂಡ ನಂಬಿದೆ. ‘ಲವ್ ಯೂ ಶಂಕರ್’ ಚಿತ್ರವು ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.
Web Stories