ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ – ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Public TV
1 Min Read

ಭೋಪಾಲ್: ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾದ ಪ್ರವೇಶ್ ಶುಕ್ಲಾ (Pravesh Shukla) ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಮಧ್ಯಪ್ರದೇಶ (Madhya Pradesh) ಹೈಕೋರ್ಟ್ (High Court) ಸೋಮವಾರ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (NSA) ಆರೋಪಿಯ ಬಂಧನ ಪ್ರಶ್ನಿಸಿ ಪ್ರವೇಶ್ ಶುಕ್ಲಾ ಪತ್ನಿ ಕಂಚನ್ ಶುಕ್ಲಾ ಮನವಿ ಸಲ್ಲಿಸಿದ್ದಳು. ಅಲ್ಲದೇ ರಾಜಕೀಯ ಕಾರಣಕ್ಕೆ ಪತಿಯನ್ನು ಬಂಧಿಸಲಾಗಿದೆ ಎಂದು ಆಕೆ ಆರೋಪಿಸಿದ್ದಾಳೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲೂ ಬುಲ್ಡೋಜರ್‌ ಸದ್ದು; ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜನೆ ಮಾಡಿದ್ದ ಆರೋಪಿ ಮನೆ ಧ್ವಂಸ

ಬಂಧನದ ವಿರುದ್ಧ ಅಧಿಕಾರಿಗಳಿಗೆ ಪ್ರತಿಕ್ರಿಯೆ ನೀಡಲು ಅವಕಾಶ ಕೊಡದೆ ಪ್ರವೇಶ್ ಶುಕ್ಲಾ ವಿರುದ್ಧ ಎನ್‍ಎಸ್‍ಎ ಕಾಯಿದೆ ಅನ್ವಯಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲ ಅನಿರುದ್ಧ ಕುಮಾರ್ ಮಿಶ್ರಾ ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರವಿ ಮಳಿಮಠ ಮತ್ತು ವಿಶಾಲ್ ಮಿಶ್ರಾ ಅವರನ್ನೊಳಗೊಂಡ ಪೀಠ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು. ವಿಚಾರಣೆಯ ವಿವರಗಳನ್ನು ಮಾಧ್ಯಮಗಳಿಗೆ ಬಹಿರಂಗಪಡಿಸದಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿತು. ಇದನ್ನೂ ಓದಿ: ಆದಿವಾಸಿ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಪ್ರಕರಣ – ಸಂತ್ರಸ್ತನ ಕಾಲು ತೊಳೆದು ಗೌರವಿಸಿದ ಮಧ್ಯಪ್ರದೇಶ ಸಿಎಂ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್